ಉತ್ತರ ಪ್ರದೇಶ | ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್‌ಗೆ ಬಸ್ ಡಿಕ್ಕಿ: 18 ಸಾವು, 19 ಜನರಿಗೆ ಗಾಯ

Date:

ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

- Advertisement -

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. 19 ಮಂದಿಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಜಿಕೋಟ್ ಗ್ರಾಮದ ಬಳಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎರಡು ವಾಹನದ ಚಾಲಕರು ಕೂಡಾ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ, “ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಅತಿವೇಗವಾಗಿ ಬಂದು ಹಿಂದಿನಿಂದ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಲಡಾಖ್‌| ಸೇನೆಯ ಟ್ಯಾಂಕ್ ಅಪಘಾತ; ನೀರಿನಲ್ಲಿ ಕೊಚ್ಚಿ ಹೋದ ಐವರು ಯೋಧರು

ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದರು.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಬಂಗಾರ್‌ಮೌ ಸರ್ಕಲ್ ಆಫೀಸರ್ (ಸಿಒ) ಅರವಿಂದ್ ಕುಮಾರ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ. ಸಂತ್ರಸ್ತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...