ಉತ್ತರ ಪ್ರದೇಶ | ಸುಲಿಗೆ ಪ್ರಕರಣದಲ್ಲಿ ವಿಎಚ್‌ಪಿ ನಾಯಕ ಬಂಧನ; ಮೇಲಧಿಕಾರಿಗಳ ಭೇಟಿ ಬಳಿಕ ಹಲವು ಸೆಕ್ಷನ್‌ಗಳನ್ನು ಕೈಬಿಟ್ಟ ಪೊಲೀಸರು

Date:

ಸುಲಿಗೆ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಯ ಬೆಂಬಲಿಗರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದ ಬಳಿಕ, ಆರೋಪಿಯ ವಿರುದ್ಧ ದಾಖಲಾಗಿದ್ದ ಗಂಭೀರ ಸೆಕ್ಷನ್‌ಗಳನ್ನು ಪೊಲೀಸರು ಕೈಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಇದು, ಭಾರೀ ವಿವಾದಕ್ಕೆ ಕಾರಣವಾಗಿದೆ.

- Advertisement -

ವಿಎಚ್‌ಪಿ ನಾಯಕ ಪ್ರಿನ್ಸ್‌ ಗೌರ್ ಬಂಧಿತ ಆರೋಪಿ. ಆತನ ವಿರುದ್ಧ ಉತ್ತರ ಪ್ರದೇಶದ ಪಿಲಿಭಿತ್‌ ಹೆಚ್ಚುವರಿ ಜಿಲ್ಲಾಧಿಕಾರಿ ರಿತು ಪುನಿಯಾ ಅವರು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಿನ್ಸ್‌ ಗೌರ್ ತಮ್ಮ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ್ದಾನೆಂದು ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಿನ್ಸ್‌ ಗೌರ್‌ನನ್ನು ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಬಿಎನ್‌ಎಸ್ ಸೆಕ್ಷನ್‌ ಗಳು 132(2), 336(3), 338, 340(2), 308(5) ಹಾಗೂ 351(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ, ವಿಎಚ್‌ಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರು ಜಿಲ್ಲಾಧಿಕಾರಿ ಜ್ಞಾನೇಂದ್ರ ಸಿಂಗ್ ಮತ್ತು ಎಸ್‌ಪಿ ವಿಕ್ರಮ್ ದಹಿಯಾ ಅವರನ್ನು ಭೇಟಿ ಮಾಡಿದ್ದರು. ತಮ್ಮ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಈ ಬೆನ್ನಲ್ಲೇ, ಆರೋಪಿ ವಿರುದ್ಧ ದಾಖಲಾಗಿದ್ದ ಸೆಕ್ಷನ್‌ಗಳಲ್ಲಿ 338 (ಜೀವಾವಧಿ ಶಿಕ್ಷೆ) ಹಾಗೂ 308(5) (ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ) ಸೆಕ್ಷನ್‌ಗಳನ್ನು ಕೈಬಿಡಲಾಗಿದೆ. ಬದಲಾಗಿ, ಕೇವಲ ಏಳು ವರ್ಷಗಳ ಶಿಕ್ಷೆ ವಿಧಿಸುವ 308(4) ಸೇರಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಮುಂದುವರೆದ ಮೋದಿ ಮುಸ್ಲಿಂ ದ್ವೇಷ ಭಾಷಣ; ವಿಪಕ್ಷಗಳ ಟೀಕೆಗೆ ರಾಮನ ಎಳೆದುತಂದ ಮೋದಿ

“ನಿಖಾ ಅಧಿಕಾರಿ ಸತೀಶ್ ಕುಮಾರ್ ಅವರು ಸಿಜೆಎಂ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ಮೂಲಕ ಕೆಲವು ಸೆಕ್ಷನ್‌ಗಳನ್ನು ತೆಗೆದುಹಾಕಲಾಗಿದೆ ಮತ್ತು ಬದಲಿಸಲಾಗಿದೆ” ಎಂದು ಆರೋಪಿ ಪರ ವಕೀಲ ಅಶ್ವನಿ ಅಗ್ನಿಹೋತ್ರಿ ಹೇಳಿರುವುದಾಗಿ ‘ಟಿಓಐ’ ವರದಿ ಮಾಡಿದೆ.

“ವಸತಿ ನಿಲಯ ಅಭಿವೃದ್ಧಿ ಪ್ರಕರಣದಲ್ಲಿ ಆರೋಪಿಯು ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದಿದ್ದಾನೆ. ನನಗೆ ಕಿರುಕುಳ ನೀಡಿರುವುದು ಮಾತ್ರವಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು, ಸುಲಿಗೆ ಮಾಡಲು ಯತ್ನಿಸಿದ್ದಾನೆ” ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಿತು ಪುನಿಯಾ ಆರೋಪಿಸಿದ್ದಾರೆ.

“ವಿಎಚ್‌ಪಿ ನಾಯಕರಿಗೆ ತಮ್ಮ ಆಕ್ಷೇಪಣೆಗಳನ್ನು ಲಿಖಿತವಾಗಿ ನೀಡುವಂತೆ ಸೂಚಿಸಲಾಗಿದೆ. ತನಿಖೆ ಸಂಪೂರ್ಣ ಪಾರದರ್ಶಕ ಮತ್ತು ಕಾನೂನಿನ ಪ್ರಕಾರ ನಡೆಯಲಿದೆ” ಎಂದು ಪಿಲಿಭಿತ್ ಜಿಲ್ಲಾಧಿಕಾರಿ ಜ್ಞಾನೇಂದ್ರ ಸಿಂಗ್ ಹೇಳಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...