ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿ

Date:

ಯೂಟ್ಯೂಬರ್ ಮತ್ತು ಪೊಲೀಸ್ ಅಧಿಕಾರಿಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ‌ ಪ್ರಕರಣ ದಾಖಲಾಗಿದ್ದು, ಆರೋಪಿ ಸಬ್‌ಇನ್ಸ್‌ಪೆಕ್ಟರ್ ಮತ್ತು ಯೂಟ್ಯೂಬರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

- Advertisement -

ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯನ್ನು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಅಪಹರಿಸಲಾಗಿತ್ತು. ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯ ಮನೆಯ ಹೊರಗೆ ಎಸೆಯಲಾಗಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆಕೆಯ ಹೇಳಿಕೆ ಆಧಾರದ ಮೇಲೆ, ಸಬ್-ಇನ್ಸ್‌ಪೆಕ್ಟರ್ ಅಮಿತ್ ಕುಮಾರ್ ಮೌರ್ಯ ಮತ್ತು ಯೂಟ್ಯೂಬರ್ ಶಿವಬರನ್ ಯಾದವ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಯೂಟ್ಯೂಬರ್ ಶಿವಬರನ್ ಯಾದವ್ ಎಂಬಾತನನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಎಸ್‌ಐ ಬಂಧನಕ್ಕೆ ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎಸ್‌ಯುವಿ ಕಾರು ಎಸ್‌ಐ ಮೌರ್ಯ ಅವರ ಹೆಸರಿನಲ್ಲಿಯೇ ನೋಂದಾಯಿಸಲಾಗಿದೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು‌ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಆರೋಪದ ಆಧಾರದ ಮೇಲೆ, ಉಪ ಪೊಲೀಸ್ ಆಯುಕ್ತ (ಪಶ್ಚಿಮ) ದಿನೇಶ್ ಚಂದ್ರ ತ್ರಿಪಾಠಿ ಮತ್ತು ಸಚೇಂಡಿ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ಅವರನ್ನು ಅಮಾನತುಗೊಳಿಸಿ ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...