ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ರುದ್ರಪ್ರಯಾಗ ಬಳಿ ಅಲಕನಂದಾ ನದಿಗೆ ಬಿದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 10 ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ
ರುದ್ರಪ್ರಯಾಗ ಮತ್ತು ಗೌಚರ್ ನಡುವಿನ ಫೋಲ್ತಿರ್ ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಬದ್ರಿನಾಥ್‌ಗೆ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ, ನದಿಗೆ ಉರುಳಿದೆ ಎಂದು ಹೇಳಲಾಗಿದೆ.
ಅಪಘಾತಕ್ಕೀಡಾದವರನ್ನು ರಾಜಸ್ಥಾನದ ಉದಯಪುರ ಮೂಲದವರು ಎಂದು ಗುರುತಿಸಲಾಗಿದೆ.
ನದಿಯಲ್ಲಿ ಇಬ್ಬರ ಮೃತದೇಹಗಳು ದೊರೆತಿದ್ದು, ಅವುಗಳನ್ನು ಮೇಲೆತ್ತಲಾಗಿದೆ. 8 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದೆ. ಇನ್ನೂ, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ದೇವರಾಜ ಅರಸು ಮತ್ತು ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ
“ಬಸ್‌ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಒಳಗೊಂಡು 8 ಮಂದಿ ಗಾಯಗೊಂಡಿದ್ದಾರೆ. ಉಳಿದ 10 ಮಂದಿ ಇನ್ನೂ ಪತ್ತೆಯಾಗಿಲ್ಲ” ಎಂದು ರೆಡ್ ಕ್ರಾಸ್ ಸೊಸೈಟಿ ರಕ್ಷಣಾ ತಂಡದ ಸದಸ್ಯ ಸತ್ಯೇಂದ್ರ ಸಿಂಗ್ ಭಂಡಾರಿ ಹೆಳಿದ್ದಾರೆ.