ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಉತ್ತರಾಖಂಡ

Date:

ಉತ್ತರಾಖಂಡ ಇಂದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಿದ್ದು, ಎಲ್ಲಾ ನಾಗರಿಕರಿಗೆ ಏಕರೂಪ ವಿವಾಹ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಚೌಕಟ್ಟನ್ನು ರೂಪಿಸಲಿದೆ. ಗೋವಾದ ನಂತರ ನಾಗರಿಕರಿಗೆ ಏಕರೂಪ ಕಾನೂನು ಚೌಕಟ್ಟನ್ನು ಹೊಂದಿರುವ ಎರಡನೇ ರಾಜ್ಯ ಇದಾಗಲಿದೆ.

- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಲ್ಪಟ್ಟ ಸುಮಾರು ಒಂದು ವರ್ಷದ ನಂತರ ಈ ಸಂಹಿತೆ ಜಾರಿಗೆ ಬಂದಿದೆ. ಇದು 2022ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ಬಹುತ್ವ ವಿರೋಧಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಕ್ಕೆ ಪ್ರಬಲ ಪ್ರತಿರೋಧ ವ್ಯಕ್ತವಾಗಿದೆ. ಏಕರೂಪ ನಾಗರಿಕ ಸಂಹಿತೆಯಿಂದಾಗಿ ಭಾರತದ ವಂಚಿತ ಜನವರ್ಗಗಳು ಅಸಮಾನತೆ ಮತ್ತು ಅರಾಜಕತೆಗಳಿಗೆ ಬಲಿಪಶುಗಳಾಗುವ ಅಪಾಯವಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಆದರೆ ಇದೀಗ ಈ ಸಂಹಿತೆಯನ್ನು ಉತ್ತರಾಖಂಡದಲ್ಲಿ ಜಾರಿಗೊಳಿಸಲಾಗಿದೆ.

ಇನ್ನು ಈ ಸಂಹಿತೆಯಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಲೀವ್‌-ಇನ್ ಸಂಬಂಧದಲ್ಲಿದ್ದರೆ ಲೀವ್‌-ಇನ್ ಸಂಬಂಧಕ್ಕೆ ಕಡ್ಡಾಯ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಹಾಗೆಯೇ ಪೋಷಕರ ಒಪ್ಪಿಗೆಯನ್ನು ಕೂಡಾ ಪಡೆಯಬೇಕಾಗುತ್ತದೆ. ಈ ನಿಯಮವು ಉತ್ತರಾಖಂಡ ಯಾವುದೇ ನಿವಾಸಿಗಳಿಗೆ, ಹೊರಗಿನ ರಾಜ್ಯದವರಿಗೆ ಅನ್ವಯವಾಗುತ್ತದೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಲೀವ್‌-ಇನ್ ಸಂಬಂಧವನ್ನು ಘೋಷಿಸಿದಿದ್ದರೆ, ರಿಜಿಸ್ಟ್ರೇಷನ್ ಮಾಡುವಲ್ಲಿ ವಿಫಲವಾದರೆ ಅಥವಾ ಸುಳ್ಳು ಮಾಹಿತಿಯನ್ನು ಒದಗಿಸಿದರೆ, ಮೂರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ನೋಂದಣಿಯಲ್ಲಿ ಒಂದು ತಿಂಗಳ ವಿಳಂಬವಾದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ, 10,000 ರೂ. ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಏಕರೂಪ ನಾಗರಿಕ ಸಂಹಿತೆ ಹೇಳುತ್ತದೆ.

ಹಾಗೆಯೇ ವಿವಾಹವನ್ನು ಕೂಡಾ ಕಡ್ಡಾಯವಾಗಿ ನೋಂದಾಯಿಸಬೇಕಾಗುತ್ತದೆ. ವಿವಾಹದ ಕನಿಷ್ಠ ವಯಸ್ಸು ಪುರುಷರಿಗೆ 21 ವರ್ಷಗಳು ಮತ್ತು ಮಹಿಳೆಯರಿಗೆ 18 ವರ್ಷವಾಗಿದೆ. ಲಿವ್-ಇನ್ ಸಂಬಂಧಗಳಿಂದ ಜನಿಸಿದ ಮಕ್ಕಳನ್ನು ದಂಪತಿಯ ಕಾನೂನುಬದ್ಧ ಮಗು ಎಂದು ಯುಸಿಸಿ ಗುರುತಿಸುತ್ತದೆ. ಆನುವಂಶಿಕವಾಗಿ ಸಮಾನ ಹಕ್ಕುಗಳನ್ನು ಅವರಿಗೆ ಅನ್ವಯವಾಗುತ್ತದೆ.

ಇದನ್ನು ಓದಿದ್ದೀರಾ? ಕೇಂದ್ರದ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ: ಸಿಎಂ ಸಿದ್ದರಾಮಯ್ಯ

ಬಹುಪತ್ನಿತ್ವ, ಬಾಲ್ಯವಿವಾಹ, ತ್ರಿವಳಿ ತಲಾಖ್ ನಿಷೇಧ ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆಯನ್ನು ವಿಧಿಸಲಾಗುತ್ತದೆ. ಈ ಸಂಹಿತೆಯು ಪರಿಶಿಷ್ಟ ಪಂಗಡಗಳಿಗೆ ಅನ್ವಯಿಸುವುದಿಲ್ಲ. ಇನ್ನು ಏಕರೂಪ ನಾಗರಿಕ ಸಂಹಿತೆಯು ಮಹಿಳೆ ತನ್ನ ಗಂಡನನ್ನು ಕಳೆದುಕೊಂಡಾಗ ಅಥವಾ ವಿಚ್ಛೇದನ ಪಡೆದಾಗ ನಿಕಾಹ್ ಹಲಾಲಾ ಮತ್ತು ಇದ್ದತ್ ಸೇರಿದಂತೆ ಮುಸ್ಲಿಮರ ಕೆಲವು ವಿಭಾಗಗಳು ಅನುಸರಿಸುವ ಪದ್ಧತಿಗಳನ್ನು ನಿಷೇಧಿಸುತ್ತದೆ.

ಈ ನಡುವೆ ಪ್ರಧಾನಿ ನರೇಂದ್ರಮೋದಿ ಅವರು ಏಕರೂಪ ನಾಗರಿಕ ಸಂಹಿತೆಗಾಗಿ ಒತ್ತಾಯಿಸುತ್ತಿದ್ದಾರೆ ಮತ್ತು ಈ ವಿಷಯದ ಬಗ್ಗೆ ಮುಸ್ಲಿಮರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆಂದು ಪ್ರತಿಪಕ್ಷಗಳನ್ನು ದೂಷಿಸುತ್ತಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್ ಯುಸಿಸಿ ಎಲ್ಲ ಭಾರತೀಯರ ಮೇಲೆ ಪರಿಣಾಮ ಬೀರಬಹುದೆಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...