ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ: ಐವರ ಸಾವು, ಹಲವರು ನಾಪತ್ತೆ

Date:

ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ ಮತ್ತು ತೆಹ್ರಿ ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಅವಶೇಷಗಳಡಿಯಲ್ಲಿ ಮಹಿಳೆಯೊಬ್ಬರು ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯ ನಂತರ ಕನಿಷ್ಠ 18 ಜನರು ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಉತ್ತರ ಭಾರತದಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿದ ಯಮುನಾ ನದಿ, ಹವಾಮಾನ ಇಲಾಖೆ ಎಚ್ಚರಿಕೆ

ಚಮೋಲಿ ಜಿಲ್ಲೆಯ ದೇವಲ್‌ನಲ್ಲಿ ಮತ್ತೊಂದು ಮೇಘಸ್ಫೋಟ ಸಂಭವಿಸಿದ್ದು, ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸುಮಾರು 20 ಜಾನುವಾರುಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ವರದಿಯಾಗಿದೆ.

ಬಾಗೇಶ್ವರ ಜಿಲ್ಲೆಯ ಪೌಸಾರಿ ಗ್ರಾಮದಲ್ಲಿ ಶುಕ್ರವಾರ ಮೇಘಸ್ಫೋಟದಿಂದ ಉಂಟಾದ ಭೂಕುಸಿತದ ನಂತರ ಬೆಟ್ಟಗಳಿಂದ ಕಲ್ಲುಗಳು ಮತ್ತು ಬಂಡೆಗಳು ಉರುಳಿ ಬಿದ್ದು ಮನೆ ನೆಲಸಮವಾಗಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ತಡವಾಗಿ ತೆಹ್ರಿ ಜಿಲ್ಲೆಯ ಗೆವಾಲಿ ಗ್ರಾಮದಲ್ಲೂ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.

ನಿನ್ನೆ ರಾತ್ರಿಯಿಂದ ಉತ್ತರಾಖಂಡದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಿಗೆ ಹಾನಿಯಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದೆ. ಹಲವು ಮನೆಗಳು ನೆಲಸಮವಾಗಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ. ಹಲವು ಸ್ಥಳಗಳಲ್ಲಿ ರಸ್ತೆಗಳೇ ಮುಚ್ಚಿಹೋಗಿವೆ. ಪ್ರವಾಸಿಗರು ಅನೇಕ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದು ಅವರ ರಕ್ಷಣೆಯ ಪ್ರಯತ್ನ ನಡೆಯುತ್ತಿವೆ.

ಅಲಕನಂದಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು ಅಧಿಕಾರಿಗಳು ರುದ್ರಪ್ರಯಾಗ ಪಟ್ಟಣದಲ್ಲಿ ಅಲರ್ಟ್ ಘೋಷಿಸಿದ್ದಾರೆ. ಏರುತ್ತಿರುವ ನೀರು ತಗ್ಗು ಪ್ರದೇಶಗಳಿಗೆ ಗಂಭೀರ ಅಪಾಯವನ್ನುಂಟುಮಾಡಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ.

ಕಳೆದ ಕೆಲವು ದಿನಗಳಲ್ಲಿ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಮೇಘಸ್ಫೋಟ ಸಂಭವಿಸುತ್ತಿದ್ದು, ಇತ್ತೀಚೆಗೆ ಉತ್ತರಕಾಶಿ ಜಿಲ್ಲೆಯ ಧರಾಲಿಯಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...