ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

Date:

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಪಕ್ಷಾಂತರ ಪರ್ವ ತೀವ್ರಗೊಂಡಿದೆ. ಇತ್ತೀಚೆಗೆ ಬಿಜೆಪಿಯಿಂದ ಆಹ್ವಾನ ಪಡೆದು ಕಮಲ ಪಡೆದ ಸೇರಿದ್ದ ಹಲವು ಪ್ರಮುಖ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು, ಸೇರ್ಪಡೆಯಾದ ಕೇವಲ ಐದೇ ದಿನಗಳಲ್ಲಿ ಮತ್ತೆ ಕಾಂಗ್ರೆಸ್‌ಗೆ ಸೇರಿದ್ದಾರೆ.

- Advertisement -

“ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಮತ್ತು ಪಕ್ಷವನ್ನು ಸೇರಿದ್ದು ನಾವು ಮಾಡಿದ ದೊಡ್ಡ ತಪ್ಪು” ಎಂದು ಬಹಿರಂಗವಾಗಿ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಉತ್ತರಾಖಂಡ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಣೇಶ್ ಗೊಡಿಯಾಲ್ ಮತ್ತು ರಾಜ್ಯ ಮಟ್ಟದ ನಾಯಕರ ಸಮ್ಮುಖದಲ್ಲಿ ಈ ನಾಯಕರು ಕಾಂಗ್ರೆಸ್ ಧ್ವಜ ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಯಾದ ವೈ ಎಸ್ ಶರ್ಮಿಳಾ

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ನಾಯಕರು ಮಾತನಾಡಿ, “ಬಿಜೆಪಿಯಲ್ಲಿ ನಾಯಕರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳಿಗೆ ಯಾವುದೇ ಬೆಲೆ ಇಲ್ಲ. ಅಲ್ಲಿ ನಾಯಕತ್ವದ ಶೈಲಿ ಉಸಿರುಗಟ್ಟಿಸುವಂತಿದೆ. ಕೇವಲ ಐದು ದಿನಗಳಲ್ಲೇ ನಮಗೆ ಬಿಜೆಪಿಯ ನೈಜ ಮುಖ ಅರ್ಥವಾಯಿತು” ಎಂದು ಆರೋಪಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿಯು (ಪಿಸಿಸಿ) ರಾಜ್ಯದಾದ್ಯಂತ ಕೈಗೊಂಡಿರುವ ‘ಪರಿವರ್ತನ ಸಂಕಲ್ಪ ಯಾತ್ರೆ’ಯಿಂದಾಗಿ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಯಾತ್ರೆಯ ವೇಳೆ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಿಕೊಳ್ಳಲಾಗುತ್ತಿದೆ. ಉತ್ತರಾಖಂಡದಲ್ಲಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ‘ಮೆಗಾ ಪ್ಲಾನ್’ ರೂಪಿಸುತ್ತಿದ್ದು, ಬಿಜೆಪಿಯ ಅತೃಪ್ತ ನಾಯಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ.

ರಾಜ್ಯದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಮತ್ತು ಆಡಳಿತ ವಿರೋಧಿ ಅಲೆ ಹೆಚ್ಚುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಖಚಿತ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...