ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

Date:

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಸುಮಾರು 30ರಿಂದ 40 ಯಾತ್ರಿಕರು ನದಿಯಂಚಿನಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ನದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

- Advertisement -

ಗಂಗೋತ್ರಿಯ ದೇವಗಡದ ಬಳಿ ನದಿ ನೀರು ಹಠಾತ್ ಹೆಚ್ಚಾಗಿದೆ. ನೀರು ಸೇತುವೆಯ ಮೇಲೆ ರಭಸವಾಗಿ ಹರಿದ ಪರಿಣಾಮ, ಸೇತುವೆ ಕುಸಿದಿದೆ. ಇಬ್ಬರು ಕೊಚ್ಚಿ ಹೋಗಿದ್ದಾರೆ. ನದಿಯಲ್ಲಿ ಸಿಲುಕಿಕೊಂಡಿದ್ದವರಲ್ಲಿ 16 ಮಂದಿಯನ್ನು ಎಸ್‌ಡಿಆರ್‌ಎಫ್‌ ತಂಡ ರಕ್ಷಿಸಿದೆ. ಉಳಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಉತ್ತರಾಖಂಡದಲ್ಲಿ ಗುರುವಾರ ಭಾರೀ ಮಳೆಯಾದ ಪರಿಣಾಮ ಡೆಹ್ರಾಡೂನ್‌ನ ರಾಬರ್ಸ್ ಗುಹೆ ಬಳಿಯ ದ್ವೀಪದಲ್ಲಿ 10 ಮಂದಿ ಯುವಕರು ಸಿಲುಕಿಕೊಂಡಿದ್ದರು. ಅವರನ್ನು ಎಸ್‌ಡಿಆರ್‌ಎಫ್‌ ತಂಡ ರಕ್ಷಿಸಿತ್ತು. ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ನದಿ-ತೊರೆಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಎದುರಾಗಿದೆ.

ಉತ್ತರಾಖಂಡ ಮಾತ್ರವಲ್ಲದೆ, ದೆಹಲಿ, ಉತ್ತರ ಪ್ರದೇಶ, ಅಸ್ಸಾಂ, ಬಿಹಾರದಲ್ಲಿಯೂ ಭಾರೀ ಮಳೆಯಾಗುತ್ತಿದೆ. ದೆಹಲಿ ಜಲಾವೃತಗೊಂಡಿದ್ದರೆ, ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಅಯೋಧ್ಯೆ ರಾಮಮಂದಿರ ಸೋರುತ್ತಿದ್ದು, ರಾಮ ಪಥ ಗುಂಡಿ ಬಿದ್ದಿದೆ. ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 12 ಸೇತುವೆಗಳು ಕುಸಿದುಬಿದ್ದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....