ಉತ್ತರಾಖಂಡ ಸುರಂಗ ಕುಸಿತ: ಸಿಲುಕಿಕೊಂಡಿರುವ 40 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ

Date:

ಬ್ರಹ್ಮಾಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಬಿದ್ದಿದ್ದು, ಸುಮಾರು 40 ಕಾರ್ಮಿಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ಅವರನ್ನು ರಕ್ಷಿಸಲು ಭಾನುವಾರ ರಾತ್ರಿಯಿಡೀ ಶ್ರಮಿಸಿದ ರಕ್ಷಣಾಧಿಕಾರಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅವರಿಗೆ ಆಹಾರ ಮತ್ತು ನೀರನ್ನು ಒದಗಿಸಿದ್ದಾರೆ.

- Advertisement -

ಕಾರ್ಮಿಕರೊಂದಿಗೆ ವಾಕಿ-ಟಾಕಿಗಳಲ್ಲಿ ಸಂವಹನವನ್ನು ಸ್ಥಾಪಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಆಹಾರ ಕೇಳಿದ್ದಾರೆ. ಅವರಿಗೆ ಕಂಪ್ರೆಸರ್‌ಗಳ ಸಹಾಯದಿಂದ ಆಹಾರ ಪ್ಯಾಕೆಟ್‌ಗಳನ್ನು ಸರಬರಾಜು ಮಾಡಲಾಗಿದೆ ಎಂದು ಸಿಲ್ಕ್ಯಾರಾ ಪೊಲೀಸ್ ನಿಯಂತ್ರಣ ಕೊಠಡಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ಸುರಂಗದ ಒಳಗಿನ ಅವಶೇಷಗಳ ಮೂಲಕ ಸಿಕ್ಕಿಬಿದ್ದ ಕಾರ್ಮಿಕರು ಹೊರಬರಲು ಮಾರ್ಗವನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಿಲ್ಕ್ಯಾರಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

ಭಾನುವಾರ ಬೆಳಗ್ಗೆ ಸುರಂಗದ ಒಂದು ಭಾಗ ಕುಸಿದಿದ್ದು, ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಕಾರ್ಮಿಕರು ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಿಂದ ಬಂದವರಾಗಿದ್ದಾರೆ.

ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಮುಂತಾದ ಏಜೆನ್ಸಿಗಳ ಸುಮಾರು 160 ಸಿಬ್ಬಂದಿ  ಪ್ರಯತ್ನಿಸುತ್ತಿದ್ದಾರೆ.

ನೀರಿನ ಪೈಪ್‌ಲೈನ್ ಮೂಲಕ ಸಾಕಷ್ಟು ಆಮ್ಲಜನಕ ಲಭ್ಯವಾಗಿದ್ದು, ಕಾರ್ಮಿಕರು ಸುರಕ್ಷಿತರಾಗಿರಲು ನೆರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...