ಉತ್ತರಾಖಂಡ SIR: ಮುಸ್ಲಿಮರನ್ನೇ ಗುರಿಯಾಗಿಸಿ ಒಬ್ಬನೇ ವ್ಯಕ್ತಿಯಿಂದ 5,906 ಆಕ್ಷೇಪಣೆ

Date:

ಉತ್ತರಾಖಂಡದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಗಹನ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ಉಧಮ್ ಸಿಂಗ್ ನಗರ ಜಿಲ್ಲೆಯ ಕಿಚ್ಛಾ ವಿಧಾನಸಭಾ ಕ್ಷೇತ್ರದಲ್ಲಿ ರಾಜೇಶ್ ತಿವಾರಿ ಎಂಬ ಒಬ್ಬರೇ ವ್ಯಕ್ತಿ ಬರೋಬ್ಬರಿ 5,906 ಆಕ್ಷೇಪಣೆಗಳನ್ನು ದಾಖಲಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಕಿಚ್ಛಾದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ 8,767 ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಮೂರನೇ ಎರಡರಷ್ಟು ಇವರೊಬ್ಬರ ಹೆಸರಿನಲ್ಲೇ ಇರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

- Advertisement -

​ರಾಜ್ಯಾದ್ಯಂತ ಫಾರ್ಮ್‌–10ರ ಅಡಿ ಒಟ್ಟು 59,604 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ ಶೇಕಡ 90ರಷ್ಟು ಕೇವಲ ಬಯಲು ಪ್ರದೇಶದ ಜಿಲ್ಲೆಗಳಿಂದಲೇ ಬಂದಿವೆ. ವರದಿಗಳ ಪ್ರಕಾರ, 40,906 ಪ್ರಕರಣಗಳಲ್ಲಿ ಮತದಾರರು ವಿಳಾಸದಲ್ಲಿ ಪತ್ತೆಯಾಗಿಲ್ಲ, 14,358 ಮಂದಿ ಬೇರೆಡೆ ನೋಂದಾಯಿಸಿಕೊಂಡಿದ್ದಾರೆ. ಇದಲ್ಲದೆ, 2,575 ಶಾಶ್ವತ ಸ್ಥಳಾಂತರ, 804 ಮರಣ, 143 ಅಪ್ರಾಪ್ತ ವಯಸ್ಸು, 205 ಭಾರತೀಯೇತರ ಹಾಗೂ 607 ಕಾರಣ ನಮೂದಿಸದ ಪ್ರಕರಣಗಳು ಸೇರಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

​ಈ ಅಸಾಮಾನ್ಯ ಬೆಳವಣಿಗೆಯ ಹಿಂದೆ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂದು ಕಾಂಗ್ರೆಸ್ ನಾಯಕ ಅಮೇಂದ್ರ ಬಿಷ್ಟ್ ಗಂಭೀರ ಆರೋಪ ಮಾಡಿದ್ದಾರೆ. ರಾಜೇಶ್ ತಿವಾರಿ ಬಿಜೆಪಿಯ ಬೂತ್ ಮಟ್ಟದ ಏಜೆಂಟ್ ಆಗಿದ್ದು, ಅಧಿಕಾರದ ಬಲದಿಂದ ಉದ್ದೇಶಪೂರ್ವಕವಾಗಿ ಮುಸ್ಲಿಂ ಮತದಾರರು ಮತ್ತು ಕಾಂಗ್ರೆಸ್ ಬೆಂಬಲಿಗರನ್ನು ಗುರಿಯಾಗಿಸಿ ಪಟ್ಟಿಯಿಂದ ತೆಗೆಸುವ ಯತ್ನ ಇದಾಗಿದೆ ಎಂದು ಅವರು ದೂರಿದ್ದಾರೆ. ಪರಿಶೀಲಿಸಲಾದ ಹಿಂದಿನ ಪಟ್ಟಿಯಲ್ಲಿ ಆಕ್ಷೇಪಣೆಗೊಳಗಾದ ಬಹುಪಾಲು ಹೆಸರುಗಳು ಮುಸ್ಲಿಮರದ್ದೇ ಆಗಿರುವುದು ಈ ಆರೋಪಕ್ಕೆ ಪುಷ್ಟಿ ನೀಡುವಂತಿದೆ.

​ಸಂವಿಧಾನಬದ್ಧವಾಗಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಇಂತಹ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ ಎಂದು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಕಿಚ್ಛಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ತಿಲಕ್ ರಾಜ್ ಬೆಹರ್ ಅವರು ಬಿಜೆಪಿಯ ಅಭ್ಯರ್ಥಿ ವಿರುದ್ಧ 10,077 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು. ಈ ಸೋಲಿನ ಹತಾಶೆಯಿಂದಲೇ ಮುಂಬರುವ ಚುನಾವಣೆಗಳಲ್ಲಿ ಲಾಭ ಪಡೆಯುವ ದುರುದ್ದೇಶದಿಂದ ಮುಸ್ಲಿಮ್ ಮತದಾರರನ್ನು ವ್ಯವಸ್ಥಿತವಾಗಿ ಕಡೆಗಣಿಸಲಾಗುತ್ತಿದೆ ಎಂಬುದು ಕಾಂಗ್ರೆಸ್‌ನ ಪ್ರಮುಖ ವಾದವಾಗಿದೆ.

​ಈ ಗೊಂದಲಗಳ ಕುರಿತು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂಡೆ ಪ್ರತಿಕ್ರಿಯಿಸಿದ್ದು, ಆಕ್ಷೇಪಣೆ ಸಲ್ಲಿಕೆಯಾದ ಮಾತ್ರಕ್ಕೆ ಯಾರ ಹೆಸರನ್ನೂ ಸ್ವಯಂಚಾಲಿತವಾಗಿ ಅಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಹಾಗೂ ವಿಚಾರಣೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಮನೆಗೆ ಸಿಗದಿರುವುದೊಂದೇ ಹೆಸರು ಅಳಿಸಲು ಕಾರಣವಾಗುವುದಿಲ್ಲ. ಮತದಾರರ ರಕ್ಷಣೆಗಾಗಿ ಮತ್ತು ಪರಿಶೀಲನೆಗಾಗಿ ಮೂರು ಜಿಲ್ಲೆಗಳಲ್ಲಿ ಒಂಬತ್ತು ಐಎಎಸ್–ಪಿಸಿಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

​ಜುಲೈ 14ರಂದು ಪ್ರಕಟವಾದ ಕರಡು ಪಟ್ಟಿಯಲ್ಲಿ ಒಟ್ಟು 71,33,785 ಮತದಾರರ ಹೆಸರುಗಳಿದ್ದವು. ಮೊದಲು ತಿವಾರಿ ಸಲ್ಲಿಸಿದ ಆಕ್ಷೇಪಣೆಗಳ ಸಂಖ್ಯೆ 4,855 ಎಂದು ದಾಖಲಾಗಿದ್ದು, ಇತ್ತೀಚಿನ ವರದಿಯಲ್ಲಿ ಅದು 5,906ಕ್ಕೆ ಏರಿಕೆಯಾಗಿದೆ. ಈ ಬೃಹತ್ ಸಂಖ್ಯಾ ವ್ಯತ್ಯಾಸ ಹಾಗೂ ಏಕವ್ಯಕ್ತಿಯ ಆಕ್ಷೇಪಣೆಗಳು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ದಾವೆಗಳ ಪರಿಶೀಲನಾ ಕಾರ್ಯವು ಸೆಪ್ಟೆಂಬರ್ 11ರವರೆಗೆ ನಡೆಯಲಿದ್ದು, ಸೆಪ್ಟೆಂಬರ್ 15ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...