ಕೇರಳಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ ಸತೀಸನ್

Date:

ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 10 ವರ್ಷಗಳ ಬಳಿಕ ಕೇರಳಂನಲ್ಲಿ ಕಾಂಗ್ರೆಸ್‌ ಆಡಳಿತ ರಚಿಸಿದೆ.

- Advertisement -

ಕೇರಳ ರಾಜಧಾನಿ ತಿರುವನಂತಪುರಂ ಸೆಂಟ್ರಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸತೀಸನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ 20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸಚಿವ ಸಂಪುಟ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಹೊಸ ಸಚಿವ ಸಂಪುಟದಲ್ಲಿ ಕಾಂಗ್ರೆಸ್ 11, ಐಯುಎಂಎಲ್ 5, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಜಾಕೋಬ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಹಾಗೂ ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷಗಳು ತಲಾ ಒಂದು ಸಚಿವ ಸ್ಥಾನಗಳನ್ನು ಪಡೆದುಕೊಂಡಿವೆ. ಇಬ್ಬರು ಮಹಿಳೆಯರು, ಇಬ್ಬರು ಪರಿಶಿಷ್ಟ ಸಮುದಾಯದವರು ಸಂಪುಟದಲ್ಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ನ್ನು ಸೋಲಿಸಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಮೈತ್ರಿಕೂಟ ನಿರ್ಣಾಯಕ ಗೆಲುವು ಸಾಧಿಸಿತು. ಆದಾಗ್ಯೂ, ಮುಖ್ಯಮಂತ್ರಿಯನ್ನು ಘೋಷಿಸಲು ಕಾಂಗ್ರೆಸ್‌ಗೆ 11 ದಿನಗಳನ್ನು ತೆಗೆದುಕೊಂಡಿತು. ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಸತೀಶನ್, ಕೆ ಸಿ ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ಇದ್ದರು. ಕಳೆದ ಐದು ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ಸತೀಶನ್ (61) ಪಕ್ಷದ ತಳಮಟ್ಟದ ನೆಲೆಯನ್ನು ಪುನರುಜ್ಜೀವನಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದರಿಂದ ಅವರನ್ನೇ ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...