ಪಿಕಪ್ ವ್ಯಾನ್ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸೇಲಂಪುರ ಪ್ರದೇಶದ ಬುದೌನ್-ಮೀರತ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಘಜಿಯಾಬಾದ್‌ನಿಂದ ಸಂಭಾಲ್‌ಗೆ ತೆರಳುತ್ತಿದ್ದ ಪಿಕಪ್ ವ್ಯಾನ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದು ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
10 people killed, 27 injured as pickup van collides with bus in Bulandshahr district of Uttar Pradesh: Official
— Press Trust of India (@PTI_News) August 18, 2024
ಇದನ್ನು ಓದಿದ್ದೀರಾ? ಗದಗ | ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದಾರುಣ ಸಾವು
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಮಾಹಿತಿ ತಿಳಿದಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ನನಗೆ ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಪ್ರಕಾಶ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
थाना सलेमपुर क्षेत्रान्तर्गत घटित सड़क दुर्घटना के सम्बन्ध मे @dmbulandshahr की बाइट।@Uppolice@adgzonemeerut@igrangemeerut pic.twitter.com/GIi4Z519qJ
— Bulandshahr Police (@bulandshahrpol) August 18, 2024