ಕೇಸರಿ ಬಣ್ಣಕ್ಕೆ ತಿರುಗಿದ ‘ವಂದೇ ಭಾರತ್‌ ಎಕ್ಸ್‌ಪ್ರೆಸ್ ‘ ರೈಲು!

Date:

  • ತ್ರಿವರ್ಣ ಧ್ವಜದಿಂದ ಸ್ಫೂರ್ತಿ ಪಡೆಯಲಾಗಿದೆ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
  • ಈ ಮೊದಲು ಬಿಳಿ ಹಾಗೂ ನೀಲಿ ಬಣ್ಣವನ್ನು ಹೊಂದಿದ್ದ ‘ವಂದೇ ಭಾರತ್‌’ ಬೋಗಿ

‘ಮೇಕ್ ಇನ್ ಇಂಡಿಯಾ’ದ ಭಾಗವಾಗಿ ಭಾರತದಲ್ಲಿಯೇ ನಿರ್ಮಾಣವಾಗುತ್ತಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ಹೈ ಸ್ಪೀಡ್ ರೈಲು ಇನ್ನು ಮುಂದೆ ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿಯವರು ಫೆ.15,2019ರಲ್ಲಿ ಮೊದಲಿಗೆ ದೆಹಲಿ-ವಾರಣಾಸಿ ನಡುವಿನ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾಗಿನಿಂದ ಇದುವರೆಗೆ ರೈಲುಗಳು ಬಿಳಿ ಹಾಗೂ ನೀಲಿ ಬಣ್ಣವನ್ನು ಹೊಂದಿದ್ದವು. ಈಗ 28ನೇ ಆವೃತ್ತಿಯ ಹೊಸ ರೈಲು ಬಿಳಿ ಮತ್ತು ಕೇಸರಿ ಬಣ್ಣವನ್ನು ಹೊಂದಿರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹೊಸ ಕೇಸರಿ ಬಣ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇನ್ನೂ ಕಾರ್ಯಾಚರಣೆಗೆ ಇಳಿದಿಲ್ಲ. ಅದು ಪ್ರಸ್ತುತ ವಂದೇ ಭಾರತ್ ರೈಲುಗಳು ತಯಾರಾಗುವ ತಮಿಳುನಾಡಿನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ಐಸಿಎಫ್) ಸಿದ್ಧವಾಗಿ ನಿಂತಿದೆ ಎಂದು ವರದಿಯಾಗಿದೆ. ಆದರೆ ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಣ್ಣ ಬದಲಾವಣೆ ಬಗ್ಗೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ನಮ್ಮ ದೇಶದ ತಂತ್ರಜ್ಞಾನವನ್ನು ಬಳಸಿ ವಂದೇ ಭಾರತ್ ರೈಲನ್ನು ತಯಾರಿಸಲಾಗುತ್ತಿದೆ. ಹೀಗಾಗಿ, ಹೊಸ ಬಣ್ಣವು ಭಾರತದ ತ್ರಿವರ್ಣ ಧ್ವಜದಿಂದ ಸ್ಫೂರ್ತಿ ಪಡೆದಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ’ ಸಂಪಾದಕೀಯ | ಮೈಸೂರು, ಬೆಂಗಳೂರು ಪಾಲಿಕೆಗಳ ‘ಕ್ಯೂಆರ್ ಕೋಡ್’ ನಡೆ ರಾಜ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಲಿ

ಈ ಹೇಳಿಕೆಯನ್ನು ಖಂಡಿಸಿರುವ ಹಲವು ನೆಟ್ಟಿಗರು, ತ್ರಿವರ್ಣ ಧ್ವಜದಲ್ಲಿ ಕೇಸರಿ, ಬಿಳಿ ಮಾತ್ರ ಇರೋದಾ? ಹಸಿರು ಕೂಡ ಸೇರಿಸಿ. ಅದನ್ನು ಸೇರಿಸಿದರೆ ದೇಶವನ್ನು ಇನ್ನಷ್ಟು ಅಂದವಾಗಿ ಪ್ರತಿನಿಧಿಸಿದಂತಾಗುತ್ತದೆ ಎಂದು ಪಾಠ ಮಾಡಿದ್ದಾರೆ.

ದೇಶಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ 50ರ ಗಡಿ ತಲುಪಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...