ಸೋನಿಯಾ ಕ್ಷಮೆಯಾಚನೆಗೆ ಬಂಕಿಮ್ ಚಂದ್ರ ವಂಶಜ, ಬಿಜೆಪಿ ಶಾಸಕ ಆಗ್ರಹ: ಏನಿದು ವಂದೇ ಮಾತರಂ ವಿವಾದ?

Date:

‘ವಂದೇ ಮಾತರಂ’ ರಚಿಸಿದ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ನೇರ ವಂಶಜ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸುಮಿತ್ರೋ ಚಟರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಬೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ.

- Advertisement -

ಆಗಸ್ಟ್ 15ರಂದು ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡುವಾಗ ಸೋನಿಯಾ ಗಾಂಧಿ ಅವರು ಅಸಮಾಧಾನ ವ್ಯಕ್ತಪಡಿಸಿ, ಗೀತೆಯನ್ನು ಅರ್ಧಕ್ಕೇ ನಿಲ್ಲಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದರ ಆಧಾರದ ಮೇಲೆ ವಿವಾದ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ವಂದೇ ಮಾತರಂ | ಲೋಕಸಭೆಯ ಬಿಜೆಪಿ ನಿಲುವಿನಿಂದ ಅಂತರ ಕಾಯ್ದುಕೊಂಡ ಜೆಡಿಯು!

ಅದಾದ ಬಳಿಕ ಸುಮಿತ್ರೋ ಚಟರ್ಜಿ ತಮ್ಮ ಪತ್ರದಲ್ಲಿ ಈ ಘಟನೆಯನ್ನು “ಐತಿಹಾಸಿಕ ತಪ್ಪಿನ ನಾಚಿಕೆಗೇಡಿನ ಮುಂದುವರಿಕೆ” ಎಂದು ಕರೆದಿದ್ದಾರೆ. ಒಬ್ಬ ಸಾಮಾನ್ಯ ಭಾರತೀಯ ಪ್ರಜೆಯಾಗಿ, ದೇಶಭಕ್ತನಾಗಿ ಹಾಗೂ ಬಂಕಿಮ್ ಚಂದ್ರ ಅವರ ಕುಟುಂಬದ ವಂಶಜನಾಗಿ ತಮಗೆ ತೀವ್ರ ನೋವಾಗಿದೆ ಎಂದು ತಿಳಿಸಿದ್ದಾರೆ.

“ವಂದೇ ಮಾತರಂ ಯಾವುದೇ ಒಂದು ರಾಜಕೀಯ ಪಕ್ಷದ ಸ್ವತ್ತಲ್ಲ, ಅದು ದೇಶದ ತ್ಯಾಗ ಮತ್ತು ಬಲಿದಾನದ ಸಂಕೇತ ಎಂದು ಪ್ರತಿಪಾದಿಸಿರುವ ಅವರು, ದೇಶದ ಹಾಗೂ ಪಶ್ಚಿಮ ಬಂಗಾಳದ ಜನರ ಕ್ಷಮೆಯಾಚಿಸಬೇಕು” ಆಗ್ರಹಿಸಿದ್ದಾರೆ.

ಮತ್ತೊಂದೆಡೆ, ಈ ಆರೋಪಗಳನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ತಳ್ಳಿಹಾಕಿದೆ. ಗೀತೆಯನ್ನು ನಿಲ್ಲಿಸುವ ಯಾವುದೇ ಪ್ರಯತ್ನ ನಡೆದಿಲ್ಲ, ಬದಲಿಗೆ ಸುದೀರ್ಘ ಸಮಯ ನಿಂತುಕೊಂಡಿದ್ದ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕುರ್ಚಿ ವ್ಯವಸ್ಥೆ ಮಾಡುವಂತೆ ಸೋನಿಯಾ ಗಾಂಧಿ ಕೇಳಿಕೊಳ್ಳುತ್ತಿದ್ದರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ಒಬಿಸಿ ಮೀಸಲಾತಿ ರದ್ದು, ಮದರಸಾಗಳಲ್ಲಿ ವಂದೇಮಾತರಂ ಕಡ್ಡಾಯ: ಸುವೇಂದು ಸರ್ಕಾರದ ಆದೇಶ

ವಂದೇ ಮಾತರಂ ವಿಚಾರದಲ್ಲಿ ಇಷ್ಟೊಂದು ವಿವಾದವೇಕೆ?

ಮುಖ್ಯವಾಗಿ ಸರ್ಕಾರಿ ಕಾರ್ಯಕ್ರಮಗಳು, ಶಾಲೆಗಳು ಮತ್ತು ಪ್ರಮುಖ ರಾಷ್ಟ್ರೀಯ ಸಮಾರಂಭಗಳಲ್ಲಿ ವಂದೇ ಮಾತರಂನ ಎಲ್ಲ ಆರು ಚರಣಗಳನ್ನೂ ಹಾಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದ ಬಳಿಕ ವಂದೇ ಮಾತರಂ ವಿವಾದ ಹೆಚ್ಚಾಗಿದೆ.

ಬಂಕಿಮಚಂದ್ರ ಚಟ್ಟೋಪಾಧ್ಯಾಯ ಅವರು ರಚಿಸಿದ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳು ನಿಸರ್ಗ ಮತ್ತು ಮಾತೃಭೂಮಿಯ ಸೌಂದರ್ಯವನ್ನು ಬಣ್ಣಿಸುತ್ತವೆ. ಆದರೆ ನಂತರದ ಚರಣಗಳಲ್ಲಿ ಭಾರತವನ್ನು ದುರ್ಗಾ, ಲಕ್ಷ್ಮಿ ಹಾಗೂ ಸರಸ್ವತಿ ದೇವಿಯರ ಸ್ವರೂಪ ಎಂದು ಆರಾಧಿಸುವ ಉಲ್ಲೇಖಗಳಿವೆ. ಆದರೆ ಒಂದು ಧರ್ಮಕ್ಕೆ ಸೇರಿದ ದೇವತೆಗಳ ಆರಾಧಿಸುವ ಉಲ್ಲೇಖವಿರುವ ಹಾಡವನ್ನು ಸರ್ಕಾರದ ಕಾರ್ಯಕ್ರಮದಲ್ಲಿ ಹಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಹುಟ್ಟಿದೆ. 1937ರಲ್ಲಿ ನೆಹರೂ ನೇತೃತ್ವದ ಕಾಂಗ್ರೆಸ್ ವರ್ಕಿಂಗ್ ಕಮಿಟಿ (ರವೀಂದ್ರನಾಥ ಠಾಗೋರ್ ಅವರ ಸಲಹೆಯಂತೆ) ಧಾರ್ಮಿಕ ಸಂವೇದನೆಗಳನ್ನು ಪರಿಗಣಿಸಿ, ಯಾವುದೇ ವಿವಾದವಿಲ್ಲದ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಸ್ವೀಕರಿಸಲು ನಿರ್ಧರಿಸಿತು.

1950ರಲ್ಲಿ ಸಂವಿಧಾನ ಸಭೆಯು ರವೀಂದ್ರನಾಥ ಠಾಗೋರರ ‘ಜನಗಣಮನ’ಕ್ಕೆ ರಾಷ್ಟ್ರಗೀತೆ (National Anthem) ಸ್ಥಾನ ನೀಡಿದರೆ, ‘ವಂದೇ ಮಾತರಂ’ಗೆ ರಾಷ್ಟ್ರೀಯ ಗಾನ (National Song) ಎಂಬ ಸಮಾನ ಗೌರವ ನೀಡಿತು. ವಂದೇ ಮಾತರಂಗೂ ರಾಷ್ಟ್ರಗೀತೆಗೆ ನೀಡುವಷ್ಟೇ ಅಧಿಕೃತ ಕಡ್ಡಾಯ ಸ್ಥಾನಮಾನ ನೀಡಬೇಕೇ ಎಂಬ ಬಗ್ಗೆ ಸಂಸತ್ತಿನಲ್ಲಿ ಮತ್ತು ರಾಜಕೀಯ ವಲಯದಲ್ಲಿ ಆಗಾಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ಈ ವಿಚಾರದಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸಲು ಆಗಾಗೇ ಬಿಜೆಪಿ ಪ್ರಯತ್ನಿಸುತ್ತಲೇ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...