VB-G RAM G ಮಸೂದೆ – ಗ್ರಾಮೀಣ ಜನರಿಗೆ ದ್ರೋಹ: ಎಸ್‌ಕೆಎಂ

Date:

ಮನರೇಗಾವನ್ನು ಬದಲಿಸಿ ಹಲವು ತಿದ್ದುಪಡಿಗಳೊಂದಿಗೆ ಮಂಡಿಸಲಾಗಿರುವ ‘VB-G RAM G ಮಸೂದೆ’ಯು ಗ್ರಾಮೀಣ ಕಾರ್ಮಿಕರು ಮತ್ತು ರೈತ ಕುಟುಂಬಗಳಿಗೆ ದ್ರೋಹ ಬಗೆಯುತ್ತದೆ. ಮನರೇಗಾ ಯೋಜನೆಯಡಿ ಖಾತ್ರಿಪಡಿಸಲಾಗಿದ್ದ ಉದ್ಯೋಗದ ಹಕ್ಕನ್ನು ಕಿತ್ತುಕಕೊಳ್ಳುತ್ತದೆ. ಇದು ಜನವಿರೋಧಿ ಮಸೂದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹೇಳಿದೆ.

- Advertisement -

‘VB-G RAM G ಮಸೂದೆ’ಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ಎಸ್‌ಕೆಎಂ ಹೇಳಿಕೆ ಬಿಡುಗಡೆ ಮಾಡಿದೆ. “ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ, ಬಡ ಕಾರ್ಮಿಕರಿಗೆ ಉದ್ಯೋಗ ಒದಗಿಸುವುತ್ತಿರುವ ಮನರೇಗಾವನ್ನು ಬದಲಿಸುವ ಬದಲು, ನಗರ ಪ್ರದೇಶಗಳಲ್ಲಿ ತೀವ್ರ ನಿರುದ್ಯೋಗವನ್ನು ಪರಿಹರಿಸಲು ಮತ್ತು ನಗರ ಭಾಗದ ಜನರಿಗೆ ಉದ್ಯೋಗ ಒದಗಿಸಲು ಮನರೇಗಾ ರೀತಿಯ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿ” ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಮನರೇಗಾ ಕೇವಲ ಗ್ರಾಮೀಣ ಜನರಿಗೆ ಉದ್ಯೋಗ ಖಾತರಿ ನೀಡುವ ಯೋಜನೆ ಮಾತ್ರವೇ ಆಗಿರಲಿಲ್ಲ. ಈ ಯೋಜನೆಯಿಂದಾಗಿ ಗ್ರಾಮೀಣ ರಸ್ತೆಗಳು, ನೀರಾವರಿ, ಕುಡಿಯುವ ನೀರು, ಪಶುಸಂಗೋಪನೆ, ನಾಗರಿಕ ಸೌಲಭ್ಯಗಳು, ಜನಪರ ವಿದ್ಯುದೀಕರಣ, ಕೃಷಿ ಸಂಸ್ಕರಣೆ ಇತ್ಯಾದಿಗಳನ್ನು ಒಳಗೊಂಡ ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿತ್ತು. ಇಂತಹ ಮಹತ್ವದ ಯೋಜನೆಯನ್ನು ರದ್ದುಗೊಳಿಸುತ್ತಿರುವು ಖಂಡನೀಯ. ಇದರ ಹಿಂದೆ, ದೊಡ್ಡ ಕಂಪೆನಿಗಳಿಗೆ ಹಿಂಬಾಗಿಲಿನಿಂದ ಲಾಭ ಮಾಡಿಕೊಡುವ ಹುನ್ನಾರವಿದೆ” ಎಂದು ಎಸ್‌ಕೆಎಂ ಆರೋಪಿಸಿದೆ.

ಈ ಲೇಖನ ಓದಿದ್ದೀರಾ?: ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

“ಮನರೇಗಾ ರದ್ದುಗೊಳಿಸುವ ‘VB-G RAM G ಮಸೂದೆ’ಯು ಮಹಿಳಾ ಕರ್ಮಿಕರ ಮೇಲೆ ತೀವ್ರ ಮತ್ತು ನೇರ ಪರಿಣಾಮ ಬೀರಲಿದೆ. ದಲಿತರು ಮತ್ತು ಆದಿವಾಸಿಗಳ ಉದ್ಯೋಗ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಮನರೇಗಾವನ್ನು ಬಲಪಡಿಸಲು ಭಾರತದಾದ್ಯಂತ ಕಾರ್ಮಿಕರು, ರೈತರು, ಯುವಕರು, ವಿದ್ಯಾರ್ಥಿಗಳು, ಮಹಿಳೆಯರು, ದಲಿತರು ಮತ್ತು ಆದಿವಾಸಿಗಳು ಹೋರಾಟಕ್ಕೆ ಇಳಿಯಬೇಕು” ಎಂದು ಕರೆ ಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...