‘ವಿಬಿ-ಜಿ ರಾಮ್ ಜಿ’ ಅಕ್ರಮ: ರಾಮನ ಹೆಸರು ಜಪಿಸುತ್ತಲೇ ಬಡವರ ಹಕ್ಕಿನ ಮೇಲೆ ದಾಳಿ – ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Date:

ಕೇಂದ್ರ ಸರ್ಕಾರದ ನೂತನ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆಯಲ್ಲಿ ನಕಲಿ ಹಾಜರಾತಿ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. “ಒಂದೆಡೆ ಶ್ರೀರಾಮನ ಹೆಸರು ಜಪಿಸುವುದು, ಇನ್ನೊಂದೆಡೆ ಅಧಿಕಾರ ರಾಜಕಾರಣ ಮಾಡುತ್ತಾ ಬಡವರ ಹಕ್ಕುಗಳ ಮೇಲೆ ದಾಳಿ ನಡೆಸುವುದು ಬಿಜೆಪಿಯ ನೈಜ ಕೆಲಸ, ಗುಣ ಮತ್ತು ಮುಖವಾಗಿದೆ” ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜೈರಾಮ್ ರಮೇಶ್, ಸರ್ಕಾರದ ಅಧಿಕೃತ ‘ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್’ ಆ್ಯಪ್‌ಗೆ ಹೋಲುವ ‘ಕ್ಲೋನ್ ಆ್ಯಪ್’ ಒಂದನ್ನು ಸೃಷ್ಟಿಸಿ, ಕಾರ್ಮಿಕರ ನಕಲಿ ಹಾಜರಾತಿ ದಾಖಲಿಸುವ ಮೂಲಕ ಯೋಜನೆ ಹಣ ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ಇದನ್ನೂ ಓದಿ: ಜುಲೈ 1ರಿಂದ ‘ನರೇಗಾ’ ರದ್ದು; ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಜಾರಿ

ಉತ್ತರ ಪ್ರದೇಶದ ಚಂದೌಲಿ, ಗಾಜಿಯಾಬಾದ್ ಮತ್ತು ಬಹ್ರೈಚ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಲಾಗಿನ್ ಐಡಿ, ಪಾಸ್‌ವರ್ಡ್ ದುರ್ಬಳಕೆ ಮಾಡಿಕೊಂಡು ಪೂರ್ವಭಾವಿಯಾಗಿ ತೆಗೆದಿರಿಸಿದ ಫೋಟೋಗಳ ಮೂಲಕ ನಕಲಿ ಹಾಜರಾತಿ ನಮೂದಿಸುತ್ತಿರುವ ಅಕ್ರಮ ಬಯಲಾಗಿದೆ ಎಂದು ವರದಿಗಳನ್ನು ಉಲ್ಲೇಖಿಸಲಾಗಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ಯನ್ನು (ಮನರೇಗಾ) ರದ್ದುಗೊಳಿಸಿ, ಜುಲೈ 1 ರಿಂದ ‘ವಿಬಿ-ಜಿ ರಾಮ್ ಜಿ’ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಹೊಸ ಯೋಜನೆ ತಂದರೂ ಗ್ರಾಮೀಣ ಪ್ರದೇಶದ ಬಡವರ ಹಕ್ಕುಗಳಿಗೆ ರಕ್ಷಣೆ ಸಿಗುತ್ತಿಲ್ಲ, ಅಕ್ರಮಗಳನ್ನು ತಡೆಯಲು ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ದೂರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಪಿ | ಆದಿವಾಸಿಗಳ ಮನೆಗಳ ನೆಲಸಮ ಹದ್ದು ಮೀರಿದ ಅನ್ಯಾಯ; ತಮ್ಮದೇ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಶಿವರಾಜ್ ಸಿಂಗ್ ಆಕ್ರೋಶ

ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಬುಡ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ...

ವಕೀಲರ ಭೇಟಿಗೂ ನಿರ್ಬಂಧ, ಫೋನ್‌ ವಶ: ದೆಹಲಿ ಪೊಲೀಸರ ವಿರುದ್ಧ ಸಿಜೆಪಿ ಆಕ್ರೋಶ

ಕಾಕ್‌ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ...

ದೀಪಾವಳಿ ನಂತರ ₹2,000 ಮೇಲ್ಪಟ್ಟ UPI ವಹಿವಾಟುಗಳಿಗೆ MDR ಶುಲ್ಕ: NPCI

ಆಯ್ದ ಯುಪಿಐ (UPI) ವಹಿವಾಟುಗಳ ಮೇಲೆ ವಿಧಿಸಲು ಉದ್ದೇಶಿಸಲಾಗಿದ್ದ 'ಮರ್ಚೆಂಟ್ ಡಿಸ್ಕೌಂಟ್...