ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಗುರುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ.
ಸದ್ಯ ಅಡ್ವಾಣಿ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
96 ವರ್ಷದ ಅಡ್ವಾಣಿ ಅವರನ್ನು ಏಮ್ಸ್‌ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಮತ್ತು ಮೂತ್ರಶಾಸ್ತ್ರ ವಿಭಾಗದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ
ಅಡ್ವಾಣಿ ಅವರಿಗೆ ಈ ವರ್ಷದ ಆರಂಭದಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಅಡ್ವಾಣಿ ಅವರು ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಅಡ್ವಾಣಿ ಮತ್ತು ಜನಸಂಘದ ಇತರ ಹಲವು ಸದಸ್ಯರು 1980ರಲ್ಲಿ ಜನತಾ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸ್ಥಾಪಿಸಿದರು.
Veteran BJP leader LK Advani admitted to AIIMS
Read @ANI Story | https://t.co/oJ9N9E6T64#LKAdvani #AIIMS #BJP pic.twitter.com/EoqYgKKG7T
— ANI Digital (@ani_digital) June 27, 2024