ಹಿರಿಯ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Date:

ಹಿರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು ಅವರನ್ನು ಶನಿವಾರ ಸಂಜೆ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭೋಸ್ಲೆ ಅವರ ಮೊಮ್ಮಗಳು ಜನೈ ಭೋಸ್ಲೆ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಜನೈ ಭೋಸ್ಲೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನ ಅಜ್ಜಿ ಆಶಾ ಭೋಸ್ಲೆ ಅವರು ತೀವ್ರ ಅನಾರೋಗ್ಯ ಮತ್ತು ಎದೆ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ಗೌಪ್ಯತೆಯನ್ನು ಗೌರವಿಸುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಒಂದು ಸಿನೆಮಾ ಹಾಡು ಮತ್ತು ಬೇಗಂ ಪರವೀನ್ ಸುಲ್ತಾನಾರ ಪ್ರಪಂಚ

ಹಾಗೆಯೇ, “ಚಿಕಿತ್ಸೆ ಮುಂದುವರೆದಿದೆ. ಎಲ್ಲವೂ ಸರಿಯಾಗುತ್ತದೆ ಎಂದು ಆಶಿಸುತ್ತೇವೆ. ನಾವು ನಿಮಗೆ ಸಕಾರಾತ್ಮಕವಾಗಿ ಹೆಚ್ಚಿನ ಮಾಹಿತಿ ನೀಡುವ ಭರವಸೆಯಲ್ಲಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಭೋಸ್ಲೆ ಅವರನ್ನು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 92 ವರ್ಷದ ಗಾಯಕಿಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಭಾರತೀಯ ಸಂಗೀತ ಲೋಕದ ದಂತಕಥೆ ಆಶಾ ಭೋಸ್ಲೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಕೇವಲ ಚಲನಚಿತ್ರ ಗೀತೆಗಳಲ್ಲದೆ, ಗಜಲ್, ಭಜನೆ, ಮತ್ತು ಪಾಪ್ ಸಂಗೀತದಲ್ಲೂ ಸಾಧನೆ ಮಾಡಿದ್ದಾರೆ. ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಏಳು ಬಾರಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಪಡೆದಿದ್ದಾರೆ ಮತ್ತು 2001ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಕೂಡ ಲಭಿಸಿದೆ.

ಚಲನಚಿತ್ರ ರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2000ನೇ ಇಸವಿಯಲ್ಲಿ ಭೋಸ್ಲೆ ಅವರಿಗೆ ದೊರಕಿದೆ. 2008ರಲ್ಲಿ ಕೇಂದ್ರ ಸರ್ಕಾರವು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ನೀಡಿ ಗೌರವಿಸಿದೆ. ಹಾಗೆಯೇ ವಿಶ್ವದಾದ್ಯಂತ ಅತಿ ಹೆಚ್ಚು ಹಾಡುಗಳನ್ನು ಧ್ವನಿಮುದ್ರಿಸಿದ ಗಾಯಕಿ ಎಂದು 2011ರಲ್ಲಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ಇವರ ಹೆಸರನ್ನು ದಾಖಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...