ಗುಜರಾತ್ | ಈಸ್ಟರ್ ಸಭೆಗೆ ನುಗ್ಗಿ ವಿಎಚ್‌ಪಿ ಕಾರ್ಯಕರ್ತರ ದಾಂಧಲೆ

Date:

ಗುಜರಾತ್‌ನ ಅಹಮದಾಬಾದ್‌ ಜಿಲ್ಲೆಯ ಓಧವ್ ಎಂಬಲ್ಲಿ ಕ್ರೈಸ್ತರ ಈಸ್ಟರ್ ಸಂಡೇ ಪ್ರಯುಕ್ತ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಕಾರ್ಯಕರ್ತರು ದಾಂಧಲೆ ಎಬ್ಬಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -

ಬಡಿಗೆ ಮತ್ತು ಲಾಠಿಗಳನ್ನು ಹಿಡಿದಿದ್ದ ಕಾರ್ಯಕರ್ತರು, ಹರ ಹರ ಮಹಾದೇವ್ ಮತ್ತು ಜೈಶ್ರೀರಾಂ ಘೋಷಣೆಗಳನ್ನು ಕೂಗುತ್ತಾ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಪ್ರದೇಶಕ್ಕೆ ನುಗ್ಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಾರ್ಥನಾ ನಿರತರಾಗಿದ್ದ ಮಹಿಳೆಯರನ್ನು ಸಭೆಯಿಂದ ಹೊರ ನಡೆಯುವಂತೆ ಆಗ್ರಹಿಸುತ್ತಿರುವುದು ವಿಡಿಯೊದಲ್ಲಿ ಕಂಡುಬರುತ್ತಿದೆ.
ಎಕ್ಸ್ ನಲ್ಲಿ ಪೋಸ್ಟ್ ಆದ ಈ ವಿಡಿಯೊ ವೈರಲ್ ಆದ ಬೆನ್ನಲ್ಲೇ ರಾಜ್ಯ ಪೊಲೀಸ್ ಮುಖ್ಯಸ್ಥರು, ಅಹ್ಮದಾಬಾದ್ ನಗರ ಪೊಲೀಸರು ಇದಕ್ಕೆ ಪ್ರತಿಕ್ರಿಯಿಸಿ, ಘಟನೆಯನ್ನು ದೃಢಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

“ಧಾರ್ಮಿಕ ಮತಾಂತರ ನಡೆಯುತ್ತಿದೆ ಎಂಬ ಅನುಮಾನದಿಂದ ವಿಎಚ್‌ಪಿ ಕಾರ್ಯಕರ್ತರು ಪ್ರಾರ್ಥನಾ ಸಭೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ್ದಾರೆ, ಇದಾದ ಸ್ವಲ್ಪವೇ ಹೊತ್ತಿನಲ್ಲಿ ಪೊಲೀಸರೂ ಸ್ಥಳಕ್ಕೆ ಧಾವಿಸಿದ್ದಾರೆ. ವಿಎಚ್‌ಪಿ ಕಾರ್ಯಕರ್ತರು ಓಧವ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮನವಿಯನ್ನೂ ಸಲ್ಲಿಸಿ, ಧಾರ್ಮಿಕ ಮತಾಂತರ ವಿರುದ್ಧ ಆತಂಕ ವ್ಯಕ್ತಪಡಿಸಿದ್ದಾರೆ. ಅಪಹರಣ ಅಥವಾ ಒತ್ತೆಯಾಳುಗಳಾಗಿ ಒಯ್ದಿರುವ ಯಾವ ಘಟನೆಯೂ ನಡೆದಿಲ್ಲ. ಯಾವುದೇ ಸಂಘರ್ಷ ಅಥವಾ ಅನಪೇಕ್ಷಿತ ಘಟನೆಗಳು ನಡೆದಿಲ್ಲ” ಎಂದು ಅಹಮದಾಬಾದ್‌ ನಗರ ಪೊಲೀಸರು ಎಕ್ಸ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ.

ವಿಮಲ್ ಪ್ರಕಾಶ್ ಸೊಸೈಟಿ‌ ಸಮೀಪದ ರಾಜೇಂದ್ರ ಪಾರ್ಕ್ ನಲ್ಲಿ ಆಯೋಜಿಸಿದ್ದ ಈಸ್ಟರ್ ಸಮಾವೇಶದ ವೇಳೆ ಈ ಘಟನೆ ನಡೆದಿದೆ ಎಂದು ಇನ್ಸ್ಪೆಕ್ಟರ್ ಪ್ರತೀಕ್ ಜಿಂಜುವಾಡಿಯಾ ಹೇಳಿದ್ದಾರೆ. ಈ ಘಟನೆ ಸಂಬಂಧ ಇನ್ನೂ ಎಫ್ಐಆರ್ ದಾಖಲಿಸಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...