ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ.
ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆಯಲ್ಲಿ ಹೇಳಿದೆ.
ಇದನ್ನು ಓದಿದ್ದೀರಾ? ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ
ಆಗಸ್ಟ್ 22ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 25 ಆಗಿದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದ್ದು ಅದೇ ದಿನ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇತ್ತೀಚೆಗೆ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಧನಕರ್ ಅವರು ದಿಢೀರ್ ಆಗಿ ರಾಜೀನಾಮೆ ನೀಡಿರುವುದು ಹಲವು ವಿವಾದ, ಅನುಮಾನಗಳಿಗೆ ಕಾರಣವಾಗಿದೆ.
