ಅತ್ಯಾಚಾರ ಸಂತ್ರಸ್ತರಿಗೆ ಗರ್ಭಪಾತ ಮಾಡಿಸುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

Date:

ಅತ್ಯಾಚಾರ ಸಂತ್ರಸ್ತೆಯು ಗರ್ಭಪಾತ ಮಾಡಿಸಿಕೊಳ್ಳುವ ಎಲ್ಲಾ ಹಕ್ಕನ್ನು ಹೊಂದಿದ್ದಾರೆ. ಹೆರುವಂತೆ ಆಕೆಗೆ ಒತ್ತಡ ಹೇರುವುದು ಆಕೆಯ ಘನತೆಗೆ ಚ್ಯುತಿ ತಂದಂತೆ ಮತ್ತು ಆಕೆಯ ಮೂಲಭೂತ ಹಕ್ಕು ಉಲ್ಲಂಘಿಸಿದಂತೆ ಆಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

- Advertisement -

ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ 17 ವರ್ಷದ ಬಾಲಕಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಈ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಯುವತಿಯ ಮೇಲೆ ಅತ್ಯಾಚಾರ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿದ ಸ್ನೇಹಿತರು

ಗರ್ಭಪಾತಕ್ಕೆ ಸಂಬಂಧಿಸಿದ ಅಧಿನಿಯಮದ ಸೆಕ್ಷನ್ 3(2) ಅನ್ನು ಉಲ್ಲೇಖಿಸಿದ ಕೋರ್ಟ್, “ಅತ್ಯಾಚಾರಕ್ಕೆ ಒಳಗಾದ ಪ್ರಕರಣದಲ್ಲಿ ಗರ್ಭಪಾತಕ್ಕೆ ನಿರಾಕರಿಸುವುದು ಮತ್ತು ತಾಯಿಯಾಗುವಂತೆ ಆಕೆಯ ಮೇಲೆ ಒತ್ತಡ ಹೇರುವುದು ಘನತೆಯಿಂದ ಬದುಕುವ ಹಕ್ಕಿಗೆ ಚ್ಯುತಿ ತಂದಂತೆ ಆಗುತ್ತದೆ. ತನ್ನ ದೇಹದ ಮೇಲೆ ಆಕೆಗೆ ಹಕ್ಕು ಇದೆ. ಆಕೆಯೇ ತಾನು ತಾಯಿಯಾಗಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು” ಎಂದು ಹೇಳಿದೆ.

ಇನ್ನು ಬಾಲಕಿಯು ಮೂರು ತಿಂಗಳು, 15 ದಿನಗಳ ಗರ್ಭಿಣಿ ಎಂದು ವರದಿಯಾಗಿದೆ. ಬಾಲಕಿ ಪರ ವಕೀಲರು, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಹೇಳಿದ್ದಾರೆ.

ಇನ್ನು ನಿಯಮ ಪ್ರಕಾರ ಅತ್ಯಾಚಾರಕ್ಕೆ ಒಳಗಾದವರಿಗೆ 24 ವಾರಗಳವರೆಗೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕಿದೆ ಎಂದು ಕೋರ್ಟ್ ಉಲ್ಲೇಖಿಸಿದೆ. ಹಾಗೆಯೇ ಈ ಹಿಂದಿನ ಸುಪ್ರೀಂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ನಡೆದ ಇಂತಹುದ್ದೆ ವಿಚಾರಣೆಯನ್ನು ಕೂಡಾ ಪ್ರಸ್ತಾಪಿಸಿದೆ. ಹಾಗೆಯೇ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...