ಪಶ್ಚಿಮ ಬಂಗಾಳ | ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಆಕ್ರೋಶಿತ ಜನರ ಗುಂಪು; ವಿಡಿಯೋ ವೈರಲ್

Date:

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನದ ವೇಳೆ ಪಶ್ಚಿಮಬಂಗಾಳದಲ್ಲಿ ಆಕ್ರೋಶಿತ ಜನರ ಗುಂಪು ಬಿಜೆಪಿ ಅಭ್ಯರ್ಥಿಯ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ.

ಇಂದು (ಮೆ 25) ನಡೆದ ಆರನೇ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳದ ಜಾರ್‌ಗ್ರಾಮ್‌ನ ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು ಅವರ ಮೇಲೆ ಪಶ್ಚಿಮ ಮಿಡ್ನಾಪುರದ ಮಂಗಲಪೋಟಾದಲ್ಲಿ ಜನ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗ್ರಾಮದಿಂದಲೇ ಅವರು ಓಡಿ ಹೋಗುವಂತಾಯಿತು.

ಪ್ರಣತ್ ತುಡು ಅವರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ರಕ್ಷಾ ಕವಚಗಳನ್ನು ಹಿಡಿದುಕೊಂಡು ಕರೆದೊಯ್ದಿದ್ದಾರೆ. ಪ್ರತಿಭಟನಾಕಾರರು ಅಭ್ಯರ್ಥಿಯ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಮಾಧ್ಯಮ ಪ್ರತಿನಿಧಿಗಳು, ಭದ್ರತಾ ಸಿಬ್ಬಂದಿ ಹಾಗೂ ಬಿಜೆಪಿ ಅಭ್ಯರ್ಥಿ ಸ್ಥಳದಿಂದ ಪರಾರಿಯಾಗುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತಗಟ್ಟೆಯ ಹೊರಗೆ ಮತ ಚಲಾಯಿಸಲು ಕಾಯುತ್ತಿದ್ದ ಮಹಿಳೆಗೆ ಪ್ರಣತ್ ತುಡು ಅವರ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಇದು ಪ್ರತಿಭಟನೆಗೆ ಕಾರಣವಾಯಿತು ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು, “ಪಕ್ಷದ ಏಜೆಂಟರನ್ನು ಮತಗಟ್ಟೆ ಒಳಗೆ ಬಿಡುತ್ತಿಲ್ಲ ಎಂಬ ಮಾಹಿತಿ ಮೇರೆಗೆ ಕೆಲವು ಮತಗಟ್ಟೆಗಳಿಗೆ ಭೇಟಿ ನಿಡುತ್ತಿದ್ದೆ. ಈ ವೇಳೆ ರಸ್ತೆಗಳನ್ನು ತಡೆದ ಟಿಎಂಸಿ ಗೂಂಡಾಗಳು, ನನ್ನ ಕಾರಿಗೆ ಇಟ್ಟಿಗೆಗಳನ್ನು ಎಸೆಯಲು ಪ್ರಾರಂಭಿಸಿದರು. ನನ್ನ ಭದ್ರತಾ ಸಿಬ್ಬಂದಿ ಮಧ್ಯ ಪ್ರವೇಶಿಸಿ, ತಡೆಯಲು ಪ್ರಯತ್ನಿಸಿದಾಗ ಅವರು ಗಾಯಗೊಂಡರು. ನನ್ನ ಜೊತೆಗಿದ್ದ ಇಬ್ಬರು ಭದ್ರತಾ ಸಿಬ್ಬಂದಿ ತಲೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಬೇಕಾಯಿತು. ಒಂದು ವೇಳೆ ನಾವು ಅಲ್ಲಿಂದ ತಪ್ಪಿಸಿಕೊಳ್ಳದೇ ಇದ್ದಿದ್ದರೆ ನಮ್ಮನ್ನು ಕೊಂದುಬಿಡುತ್ತಿದ್ದರು” ಎಂದು ಹೇಳಿಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಕಲ್ಲುತೂರಾಟದ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರ, ತೆಲಂಗಾಣದಲ್ಲಿ ರಸ್ತೆ ಅಪಘಾತ: 8 ಸಾವು

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ...

ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ...

ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ ಮೃತದೇಹಗಳು ಇಂದು ಭಾರತಕ್ಕೆ

ಎರಡು ದಿನಗಳ ಹಿಂದೆ ಕುವೈತ್ ಬೆಂಕಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ...

ಶಾಸಕ ಸ್ಥಾನಕ್ಕೆ ಸಿಕ್ಕಿಂ ಸಿಎಂ ಪತ್ನಿ ರಾಜೀನಾಮೆ: ಒಂದು ದಿನದ ಹಿಂದಷ್ಟೆ ಪ್ರೇಮ್ ಸಿಂಗ್‌ ಪ್ರಮಾಣವಚನ

ಒಂದು ದಿನದ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿಕ್ಕಿಂ ಮುಖ್ಯಮಂತ್ರಿ...