ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರ ಒಡೆದು ಹಾಕಿದ ಶಾಸಕ: ಕ್ರಮಕ್ಕೆ ಮುಂದಾದ ಆಯೋಗ

Date:

ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರವನ್ನು ಒಡೆದು ಹಾಕಿದ ಆಂಧ್ರ ಪ್ರದೇಶದ ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದೆ.

- Advertisement -

ಈ ಘಟನೆಯು ಮೇ 13 ರಂದು ಮಚರಾಲಾ ವಿಧಾನಸಭಾ ಕ್ಷೆತ್ರದ ಮತಗಟ್ಟೆ ಸಂಖ್ಯೆ 202 ಮತ್ತು 7 ರಲ್ಲಿ ಸಂಭವಿಸಿದ್ದು, ಶಾಸಕ ಮಾಡಿದ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚುನಾವಣಾ ಆಯೋಗವು ವಿಡಿಯೋಗಳನ್ನು ರಾಜ್ಯ ಪೊಲೀಸರಿಗೆ ನೀಡಿ ತನಿಖೆ ನಡೆಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಹಾಲಿ ಶಾಸಕ ಪಿ ರಾಮಕೃಷ್ಣ ರೆಡ್ಡಿ ಮಚರಾಲಾ ವಿಧಾನಸಭಾ ಕ್ಷೆತ್ರದ ಮತಗಟ್ಟೆ ಸಂಖ್ಯೆ 202 ಮತ್ತು 7 ರಲ್ಲಿ ಇವಿಎಂ ಯಂತ್ರವನ್ನು ಹಾಳು ಮಾಡಿರುವುದು ವೆಬ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಲಾಂಡು ಜಿಲ್ಲೆಯ ಚುನಾವಣಾ ಅಧಿಕಾರಿಗಳು ವಿಡಿಯೋ ದೃಶ್ಯಗಳನ್ನು ಪೊಲೀಸರಿಗೆ ನೀಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ” ಎಂದು ಆಂಧ್ರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಅಧಿಕಾರಿಗಳ ಮಾಹಿತಿಯ ಪ್ರಕಾರ ಮತಯಂತ್ರ ಹಾಳು ಮಾಡಿದ ಪ್ರಕರಣದಲ್ಲಿ ಶಾಸಕನ ಹೆಸರನ್ನು ಸೇರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

“ಚುನಾವಣಾ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು,ಸಿಇಒ ಮುಖೇಶ್ ಕುಮಾರ್ ಮೀನಾ ಅವರು ದುಷ್ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ” ಎಂದು ಆಯೋಗದ ಮೂಲಗಳು ತಿಳಿಸಿವೆ.

“ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದಾರೆ. ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ಇವಿಎಂ ಯಂತ್ರವನ್ನು ನಾಶ ಮಾಡಿದ್ದು, ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸುತ್ತೇನೆ. ವೈಎಸ್‌ಪಿ ಪಕ್ಷದ ಅರಾಜಕತೆ ಜೂ.4 ರಂದು ಅಂತ್ಯವಾಗಲಿದೆ” ಎಂದು ಟಿಡಿಪಿ ನಾಯಕ ನರಾ ಲೋಕೇಶ್ ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಮೇ.13 ರಂದು ವಿಧಾನಸಭೆ ಹಾಗೂ ಲೋಕಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...