ಮಾಜಿ ರಾಜ್ಯಪಾಲರಿಗೆ ಅಮಿತ್ ಶಾ ಎಚ್ಚರಿಕೆ ನೀಡುವ ರೀತಿಯಲ್ಲಿ ಮಾತು: ವಿಡಿಯೋ ವೈರಲ್

Date:

ಎನ್‌ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರಾರಾಜನ್‌ ಅವರ ನಡುವೆ ನಡೆದ ಮಾತುಕತೆ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

- Advertisement -

ಕ್ಯಾಮೆರಾದಲ್ಲಿ ಸೆರೆಯಾಗಿರುವಂತೆ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್‌ ವೇದಿಕೆಯಲ್ಲಿದ್ದ ಎಲ್ಲ ಗಣ್ಯರಿಗೂ ನಮಸ್ಕರಿಸುತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ನಮಸ್ಕರಿಸಿದ್ದಾರೆ. ನಮಸ್ಕರಿಸಿ ಹೋಗುತ್ತಿದ್ದ ತಮಿಳಿಸೈ ಅವರನ್ನು ವಾಪಸ್‌ ಕರೆದ ಅಮಿತ್ ಶಾ ಎಚ್ಚರಿಕೆ ನೀಡುವ ರೀತಿಯಲ್ಲಿ ಕೈತೋರಿಸಿ ಗಂಭಿರವಾಗಿ ಮಾತನಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಇವರಿಬ್ಬರ ನಡುವಿನ ಸಂಭಾಷಣೆ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಅಮಿತ್‌ ಶಾ ಅವರು ತಮಿಳಿಸೈ ಅವರೊಂದಿಗೆ ಮಾತನಾಡುವಾಗ ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡ, ನಿತಿನ್‌ ಗಡ್ಕರಿ ಪಕ್ಕದಲ್ಲೇ ಕುಳಿತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಈ ಘಟನೆಯನ್ನು ಕೆಲವರು ತಮಿಳುನಾಡು ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಒಳಜಗಳಗಳ ಬಗ್ಗೆ ಸಂಬಂಧ ಕಲ್ಪಿಸಿದ್ದಾರೆ. ಇತ್ತೀಚಿನ ಕೆಲವು ದಿನಗಳಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ ತಮಿಳಿಸೈ ಸೌಂದರರಾಜನ್‌ ಅವರ ಬೆಂಬಲಿಗರು ಪರಸ್ಪರ ವಿರೋಧಿಸುವ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಮಿತ್‌ ಶಾ ಮುಂದೆ ಈ ರೀತಿ ಆಗದಂತೆ ತಮಿಳಿಸೈ ಅವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ತಮಿಳುನಾಡಿನ ಡಿಎಂಕೆ ವಕ್ತಾರ ಸರವಣನ್‌ ಅಣ್ಣಾದೊರೈ,” ಯಾವ ರೀತಿಯ ರಾಜಕೀಯವಿದು? ತಮಿಳುನಾಡಿನ ಮಹಿಳಾ ರಾಜಕಾರಣಿಗೆ ಸಾರ್ವಜನಿಕವಾಗಿ ಛೀಮಾರಿ ಹಾಕುವುದು ಸೌಜನ್ಯವೆ? ಅಮಿತ್‌ ಶಾ ಅವರಿಗೆ ಎಲ್ಲರು ಇದನ್ನು ನೋಡುತ್ತಾರೆ ಎಂಬುದು ಗೊತ್ತಿದೆ. ಇದೊಂದು ಕೆಟ್ಟ ನಿದರ್ಶನ” ಎಂದು ಹೇಳಿದ್ದಾರೆ.

ತಮಿಳುನಾಡಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸ್ಥಾನವನ್ನು ಗಳಿಸಲಿಲ್ಲವಾದ ಕಾರಣ ಎರಡೂ ಬಣದ ನಾಯಕರ ಬೆಂಬಲಿಗರು ಪಕ್ಷದ ಸೋಲಿಗೆ ಒಬ್ಬರನ್ನೊಬ್ಬರನ್ನು ಹೊಣೆ ಮಾಡುತ್ತಿದ್ದಾರೆ. ತಮಿಳಿಸೈ ಕೂಡ ಚುನಾವಣೆ ಸೋಲಿಗೆ ಅಣ್ಣಾಮಲೈ ಅವರನ್ನು ದೂರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ...

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...