ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸುತ್ತಿರುವ ವಿಡಿಯೋ ವೈರಲ್; ಓರ್ವನ ಬಂಧನ

Date:

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಘಟನೆಯು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೈರಲ್ ವಿಡಿಯೋದಲ್ಲಿ ನಾಲ್ವರು ಪುರುಷರ ಗುಂಪು ಮಹಿಳೆಯನ್ನು ಥಳಿಸಿದ್ದಾರೆ. ಒಬ್ಬ ವ್ಯಕ್ತಿ ಕೋಲಿನಿಂದ ಆಕೆಗೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಜೂನ್ 20ರಂದು ಮಹಿಳೆ ತನ್ನ ಪ್ರಿಯಕರನೊಂದಿಗೆ ಮನೆ ತೊರೆದು ಹೋಗಿದ್ದರು. ಆಕೆಯನ್ನು ಮರಳಿ ಕರೆತಂದು, ಥಳಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಮಹಿಳೆಯನ್ನು ಥಳಿಸಿದ ಪ್ರಮುಖ ಆರೋಪಿ ನೂರ್ ಸಿಂಗ್ ಭುರಿಯಾನನ್ನು ಬಂಧಿಸಲಾಗಿದೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಅವರು ಶನಿವಾರ ಬೆಳಿಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿದ್ದು, “ಧಾರ್ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಬಿಜೆಪಿ ಸರ್ಕಾರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ” ಎಂದಿದ್ದಾರೆ.

ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಟ್ಯಾಗ್ ಮಾಡಿರುವ ಅವರು, “ಘಟನೆಯನ್ನು ನಿಷ್ಪಕ್ಷಪಾತವಾಗಿ ಮತ್ತು ತ್ವರಿತವಾಗಿ ತನಿಖೆ ಮಾಡಿ, ಆದ್ಯತೆಯ ಮೇಲೆ ನ್ಯಾಯ ಕೊಡಿಸಬೇಕು. ಮಧ್ಯಪ್ರದೇಶದಲ್ಲಿ ಮಹಿಳೆಯರು ಏಕೆ ಹೆಚ್ಚು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ನಿಮ್ಮ ಸರ್ಕಾರ ಪದೇ ಪದೇ ವಿಫಲವಾಗುತ್ತಿರುವುದೇಕೆ” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್ ಅವರು ಧಾರ್ (ST) ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...