VIDEO | ರಾಹುಲ್ ಗಾಂಧಿ ವಿರುದ್ಧದ ಪ್ರತಿಭಟನೆ; ಬಿಜೆಪಿ ಸಂಸದರ ನಡುವೆ ನುಗ್ಗಿ ‘ಅಮಿತ್ ಶಾ ಶೇಮ್ ಶೇಮ್’ ಘೋಷಣೆ ಕೂಗಿದ ಪವನ್ ಖೇರಾ!

Date:

ಸಂಸತ್ ಆವರಣದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸಂಸದರು ಪರಸ್ಪರರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಹಾಸ್ಯಮಿಶ್ರಿತ ರಾಜಕೀಯ ಸನ್ನಿವೇಶವೊಂದು ನಡೆದಿದೆ. ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗುತ್ತಿದ್ದ ಬಿಜೆಪಿ ಸಂಸದರ ಗುಂಪಿನ ಬಳಿಗೇ ತೆರಳಿದ ಕಾಂಗ್ರೆಸ್ ಸಂಸದ ಪವನ್ ಖೇರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ, ಬಿಜೆಪಿ ಸಂಸದರು ತಬ್ಬಿಬ್ಬಾಗಿದ್ದಾರೆ.

- Advertisement -

ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರವಾಗಿ ಸಂಸತ್ತಿನಲ್ಲಿ ಭಾರೀ ಕೋಲಾಹಲ ನಡೆಯುತ್ತಿದೆ. ವಿಪಕ್ಷಗಳು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಇದೇ ಹೊತ್ತಿನಲ್ಲಿ, ವಿದ್ಯಾರ್ಥಿಗಳ ವಿಚಾರವಾಗಿ ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಸಿದ್ಧರಿದ್ದರೂ ಪ್ರತಿಪಕ್ಷವೇ ಚರ್ಚೆಯಿಂದ ಹಿಂದೆ ಸರಿಯುತ್ತಿದೆ ಎಂದು ಬಿಜೆಪಿಗರು ಆರೋಪಿಸಿ, ರಾಹುಲ್‌ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಈ ವೇಳೆ, ಪವನ್ ಖೇರಾ ನೇರವಾಗಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ಜಾಗಕ್ಕೆ ತೆರಳಿದ್ದಾರೆ. ಬಿಜೆಪಿ ಸಂಸದರು ರಾಹುಲ್ ಗಾಂಧಿ ಮತ್ತು ಪ್ರತಿಪಕ್ಷವನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗುತ್ತಿದ್ದರೆ, ಅವರ ನಡುವೆಯೇ ನಿಂತ ಖೇರಾ ‘ಅಮಿತ್ ಶಾ ಶೇಮ್ ಶೇಮ್… ಹೆದರಿಲ್ಲ ಎಂದಾದರೆ ಸಂಸತ್ತಿಗೆ ಬನ್ನಿ’ ಎಂದು ಹಿಂದಿಯಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ; ಖೇರಾ ಅವರ ಅನಿರೀಕ್ಷಿತ ಘೋಷಣೆಯಿಂದ ಕೆಲ ಬಿಜೆಪಿ ಸಂಸದರು ತಬ್ಬಿಬ್ಬಾಗಿದ್ದಾರೆ. ಪರಸ್ಪರ ಮುಖ ನೋಡಿಕೊಂಡು ಪೆಚ್ಚಾಗಿದ್ದಾರೆ.

ಪವನ್ ಖೇರಾ ಅವರು ಘೋಷಣೆಯಿಂದಾಗಿ ಸ್ಥಳದಲ್ಲಿ ಬಿಜೆಪಿಗರ ಪ್ರತಿಭಟನೆಯ ದಿಕ್ಕೇ ಬದಲಾಗಿದೆ. ಬಿಜೆಪಿಗರು ಮತ್ತು ವಿಪಕ್ಷಗಳ ಸಂಸದರು ಪರಸ್ಪರ ಘೋಷಣೆಗಳನ್ನು ಕೂಗಿದ್ದಾರೆ.

ಈ ಘಟನೆಯ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ನೆಟ್ಟಿಗರು ಹಾಸ್ಯಭರಿತ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...