ಎಡಪಕ್ಷ, ಸಿಜೆಪಿ ಪ್ರತಿಭಟನೆಯಿಂದ ವಿದ್ಯಾರ್ಥಿಗಳನ್ನು ತಡೆಯುವ ಆದೇಶ ಹಿಂಪಡೆದ ವಿಜಯ್ ಸರ್ಕಾರ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಎಡಪಂಥೀಯ ಸಂಘಟನೆಗಳು ಆಯೋಜಿಸುವ ಪ್ರತಿಭಟನೆ ಮತ್ತು ಧರಣಿಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯಲು ಹೊರಡಿಸಲಾಗಿದ್ದ ವಿವಾದಾತ್ಮಕ ಆದೇಶವನ್ನು ನಟ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು (ಟಿವಿಕೆ) ಸರ್ಕಾರ ಕೊನೆಗೂ ವಾಪಸ್ ಪಡೆದಿದೆ. ಈ ವಿವಾದಾತ್ಮಕ ಸುತ್ತೋಲೆಗೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹಾಗೂ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -

ಆಗಸ್ಟ್ 14ರಂದು ತಮಿಳುನಾಡಿನ ಪ್ರೌಢಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆಗಳಿಗೆ ಆಡಳಿತಾರೂಢ ಸರ್ಕಾರದಿಂದ ನಿರ್ದೇಶನವೊಂದನ್ನು ನೀಡಲಾಗಿತ್ತು. ಅದರಂತೆ, ಎಡಪಕ್ಷಗಳು ಮತ್ತು ಸಿಜೆಪಿ ಆಯೋಜಿಸುವ ಯಾವುದೇ ಧರಣಿ ಅಥವಾ ಪ್ರತಿಭಟನೆಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸದಂತೆ ಜಂಟಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿತ್ತು. ಅಲ್ಲದೆ, ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು ಆಗಸ್ಟ್ 20ರ ಒಳಗಾಗಿ ಸಲ್ಲಿಸಬೇಕೆಂದು ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ತಾಕೀತು ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಜೋಸೆಫ್ ವಿಜಯ್ ಸಂಪುಟದಲ್ಲಿ ಹೊಸ ದಾಖಲೆ; 8 ಮಂದಿ ದಲಿತರಿಗೆ ಸ್ಥಾನ!

ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸಿಜೆಪಿ ರಾಷ್ಟ್ರೀಯ ಸಹ-ಸಂಚಾಲಕರಾದ ಸೌರವ್ ದಾಸ್ ಅವರು ಸರ್ಕಾರದ ಈ ಆದೇಶವನ್ನು “ಸಂವಿಧಾನ ಬಾಹಿರ”, “ಅಸಂಗತ” ಮತ್ತು “ಅತಾರ್ಕಿಕ” ನಿರ್ಧಾರ ಎಂದು ತೀವ್ರವಾಗಿ ವಿರೋಧಿಸಿದ್ದರು. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕನ್ನು ಮತ್ತು ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಹಲವು ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ಕಳವಳ ವ್ಯಕ್ತಪಡಿಸಿದ್ದವು. ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಿದ್ದ ಎಡಪಕ್ಷಗಳ ವಲಯದಲ್ಲೂ ಈ ಸುತ್ತೋಲೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.

ನಾಲ್ಕೂ ಕಡೆಯಿಂದ ಆಕ್ರೋಶದ ಅಲೆಗಳು ಎದ್ದ ಹಿನ್ನೆಲೆಯಲ್ಲಿ, ಬುಧವಾರ ತಮಿಳುನಾಡು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಹಿಂದಿನ ವಿವಾದಾತ್ಮಕ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣವಾಗಿ ರದ್ದುಗೊಳಿಸಿ ಹೊಸ ಸುತ್ತೋಲೆ ಹೊರಡಿಸಿದ್ದಾರೆ.

ದೇಶಾದ್ಯಂತ ಶಿಕ್ಷಣ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಪಡೆಗಳು (Gen Z ಮತ್ತು Gen Alpha) ಸಕ್ರಿಯವಾಗಿ ಬೀದಿಗಿಳಿದು ಹೋರಾಡುತ್ತಿರುವ ಈ ಸಮಯದಲ್ಲಿ, ರಾಜ್ಯ ಸರ್ಕಾರವು ಪ್ರತಿಭಟನೆಯನ್ನು ಹತೋಟಿಗೆ ತರಲು ಹೋಗಿ ಕೊನೆಗೆ ಸಾರ್ವಜನಿಕ ಒತ್ತಡಕ್ಕೆ ಮಣಿದು ಆದೇಶ ಹಿಂಪಡೆದಿರುವುದು ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...