ತಮಿಳುನಾಡು | ಬಹುಮತ ಕೊರತೆ; ಎಡಪಕ್ಷಗಳು, ವಿಸಿಕೆ ಬೆಂಬಲ ಪಡೆಯಲು ಜೋಸೆಫ್ ವಿಜಯ್ ಯತ್ನ

Date:

ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರಿಗೆ ಸರ್ಕಾರ ರಚಿಸಿ ಸದನದಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರು ಇನ್ನೂ ಅವಕಾಶ ನೀಡಿಲ್ಲ. ಈ ನಡುವೆ ಜೋಸೆಫ್ ವಿಜಯ್ ಎಡಪಕ್ಷಗಳು, ವಿಸಿಕೆ ಬೆಂಬಲ ಪಡೆಯುವ ಯತ್ನ ನಡೆಸುತ್ತಿದ್ದಾರೆ.

- Advertisement -

ಇಂದು ವಿಜಯ್ ಅವರು ತಮಿಳುನಾಡಿನ ಅಧಿಕಾರದ ಕೇಂದ್ರವಾದ ಫೋರ್ಟ್ ಸೇಂಟ್ ಜಾರ್ಜ್‌ಗೆ ಪಾದಯಾತ್ರೆ ನಡೆಸುತ್ತಿದ್ದು ಆರು ಸದಸ್ಯ ಬಲ ಹೊಂದಿರುವ ಮೂರು ಸಣ್ಣ ಪಕ್ಷಗಳ ಬೆಂಬಲದ ಮಾತುಕತೆಗೆ ಸಜ್ಜಾಗಿದ್ದಾರೆ. ಸಿಪಿಎಂ, ಸಿಪಿಐ ಮತ್ತು ವಿಸಿಕೆ ಪಕ್ಷಗಳು ಶುಕ್ರವಾರ ಉನ್ನತ ಮಟ್ಟದ ಸಮಿತಿ ಸಭೆಗಳನ್ನು ನಡೆಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಜೋಸೆಫ್ ವಿಜಯ್‌ಗೆ ಅವಕಾಶ ನೀಡದಿರುವುದು ಜನಾದೇಶಕ್ಕೆ ಅಪಮಾನ: ಕಮಲ್, ವಿಶಾಲ್ ಗರಂ

ಗುರುವಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ವಿಜಯ್ ಅವರನ್ನು ಸರ್ಕಾರ ರಚಿಸಲು ಅಗತ್ಯವಿರುವ ಬಹುಮತವಿಲ್ಲ ಎಂದು ಹೇಳಿ ಎರಡನೇ ಬಾರಿಗೆ ಸರ್ಕಾರ ರಚನೆಗೆ ಅವಕಾಶ ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ ನೀಡಿದ್ದನ್ನು ಸಿಪಿಎಂ, ಸಿಪಿಐ ಮತ್ತು ವಿಸಿಕೆ ಖಂಡಿಸಿವೆ. ಈ ನಡುವೆಯೇ ವಿಜಯ್ ಈ ಪಕ್ಷಗಳ ಬೆಂಬಲ ಪಡೆಯುವಲ್ಲಿ ಗಮನ ವಹಿಸಿದ್ದಾರೆ.

117 ಶಾಸಕರ ಬೆಂಬಲವಿದ್ದರೆ ಮಾತ್ರ ವಿಜಯ್‌ಗೆ ಸರ್ಕಾರ ರಚಿಸಲು ಆಹ್ವಾನ ನೀಡುವುದಾಗಿ ರಾಜ್ಯಪಾಲರು ಹೇಳಿದ್ದಾರೆ. ಆದರೆ ವಿಜಯ್ ಮೈತ್ರಿಕೂಟದಲ್ಲಿ 113 ಶಾಸಕರು (ಟಿವಿಕೆಯ 108 ಮತ್ತು ಕಾಂಗ್ರೆಸ್‌ನ 5) ಇದ್ದು, ಇನ್ನೂ ನಾಲ್ಕು ಸ್ಥಾನಗಳ ಕೊರತೆಯಿದೆ. ಆರು ಸದಸ್ಯ ಬಲ ಹೊಂದಿರುವ ಎಡಪಕ್ಷಗಳು, ಇತರೆ ಪಕ್ಷಗಳು ಟಿವಿಕೆಗೆ ಬೆಂಬಲ ನೀಡಿದರೆ ವಿಜಯ್ ಸರ್ಕಾರ ರಚಿಸಲು ಸಾಧ್ಯವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...