ಎಐಎಡಿಎಂಕೆಗೆ ಸಂಪುಟದಲ್ಲಿ ಸ್ಥಾನವಿಲ್ಲ: ವಿಸಿಕೆ, ಸಿಪಿಎಂ ಎಚ್ಚರಿಕೆ ಬೆನ್ನಲ್ಲೇ ಸಿಎಂ ವಿಜಯ್ ನಿರ್ಧಾರ

Date:

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ನೇತೃತ್ವದ ಸರ್ಕಾರದಲ್ಲಿ, ಎಐಎಡಿಎಂಕೆ ಬಂಡಾಯ ಶಾಸಕರಿಗೆ ಸಚಿವ ಸ್ಥಾನ ನೀಡದಿರಲು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಿರ್ಧರಿಸಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಿರುವ ಎಡಪಕ್ಷಗಳು (ಸಿಪಿಎಂ) ಹಾಗೂ ವಿಸಿಕೆ (ವಿದುತಲೈ ಚಿರುತೈಗಳ್ ಕಚ್ಚಿ) ನೀಡಿದ ಕಟ್ಟುನಿಟ್ಟಿನ ಎಚ್ಚರಿಕೆಯ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

- Advertisement -

ಗುರುವಾರ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿಗೆ (ಕೆ. ರಾಜೇಶ್ ಕುಮಾರ್ ಮತ್ತು ಪಿ. ವಿಶ್ವನಾಥನ್) ಸಂಪುಟದಲ್ಲಿ ಸ್ಥಾನ ನೀಡಲಾಗುತ್ತಿದೆ. ಆದರೆ, ಮಾಜಿ ಸಚಿವರಾದ ಎಸ್.ಪಿ. ವೇಲುಮಣಿ ಹಾಗೂ ಸಿ.ವಿ. ಷಣ್ಮುಗಂ ನೇತೃತ್ವದ 25 ಎಐಎಡಿಎಂಕೆ ಬಂಡಾಯ ಶಾಸಕರ ಬಣವು ಸಂಪುಟದಲ್ಲಿ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದರೂ, ಪ್ರಸ್ತುತ ಈ ಬಣವನ್ನು ಸಂಪುಟದಿಂದ ಹೊರಗಿಡಲಾಗಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ‘ನೋಡ್ತಾ ಇರಿ, ಬಂಗಾಳದ ಥರ ಕೇರಳನೂ ಗೆಲ್ತೀವಿ’: ಪ್ರಲ್ಹಾದ್‌ ಜೋಷಿ ಬಡಾಯಿ!

ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡಿರುವ ಸಿಪಿಎಂ ಮತ್ತು ವಿಸಿಕೆ, ಎಐಎಡಿಎಂಕೆ ಬಂಡಾಯಗಾರರನ್ನು ಸರ್ಕಾರದಲ್ಲಿ ಸೇರಿಸಿಕೊಳ್ಳುವುದನ್ನು ಬಹಿರಂಗವಾಗಿಯೇ ವಿರೋಧಿಸಿವೆ. ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಮಂಗಳವಾರ ತಿರುವಾರೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, “ಒಂದು ವೇಳೆ ಎಐಎಡಿಎಂಕೆ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ಟಿವಿಕೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಸಿಪಿಎಂ ಮರುಪರಿಶೀಲಿಸಬೇಕಾಗುತ್ತದೆ,” ಎಂದು ನೇರ ಎಚ್ಚರಿಕೆ ನೀಡಿದ್ದರು.

“ರಾಷ್ಟ್ರಪತಿ ಆಡಳಿತ ಹೇರಿಕೆ ಹಾಗೂ ಬಿಜೆಪಿಯ ಹಿಂಬಾಗಿಲ ಪ್ರವೇಶವನ್ನು ತಡೆಯುವ ಏಕೈಕ ಉದ್ದೇಶದಿಂದ ಮಾತ್ರವೇ ನಾವು ಟಿವಿಕೆಗೆ ಬೆಂಬಲ ನೀಡಿದ್ದೇವೆ. ಇತ್ತೀಚಿನ ಚುನಾವಣೆಯ ಜನಾದೇಶವು ಡಿಎಂಕೆ ಹಾಗೂ ಎಐಎಡಿಎಂಕೆ ಎರಡೂ ಪಕ್ಷಗಳ ವಿರುದ್ಧವಾಗಿದೆ. ಹೀಗಿರುವಾಗ ಎಐಎಡಿಎಂಕೆ ಬಂಡಾಯಗಾರರಿಗೆ ಮಣೆ ಹಾಕುವುದು ಟಿವಿಕೆ ನೀಡಿದ್ದ ‘ಸ್ವಚ್ಛ ಆಡಳಿತ’ದ ಭರವಸೆ ಹಾಗೂ ಜನಾದೇಶಕ್ಕೆ ಮಾಡಿದ ದೊಡ್ಡ ದ್ರೋಹವಾಗುತ್ತದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...