ಜಿಲ್ಲಾಧಿಕಾರಿ ಹಾಗೂ ಕೆಲ ಅಧಿಕಾರಿಗಳ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿ, ಹಲ್ಲೆಗೈದಿರುವ ಘಟನೆ ಆಂಧ್ರಪ್ರದೇಶದ ವಿಕಾರಾಬಾದ್ನಲ್ಲಿ ನಡೆದಿದೆ. ಪ್ರಕರಣದಲ್ಲಿ ಬಿಆರ್ಎಸ್ ಪಕ್ಷದ ಮಾಜಿ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಕಾರಾಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ, ಕೆಲವರು ಜಿಲ್ಲಾಧಿಕಾರಿ ಮೇಲೆ ದಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ್ದಾರೆ. ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಾಜುಗಳನ್ನು ಪುಡಿ ಮಾಡಿದ್ದಾರೆ. ದಾಳಿಯ ಹಿಂದೆ ಕೊಡಂಗಲ್ ಕ್ಷೇತ್ರದ ಮಾಜಿ ಶಾಸಕ ನರೇಂದ್ರ ರೆಡ್ಡಿ ಅವರ ಕೈವಾಡವಿದೆ ಎಂದು ಶಂಕಿಸಲಾಗಿದೆ.
ಜಿಲ್ಲಾಧಿಕಾರಿ ಮೇಲೆ ದಾಳಿ ನಡೆಸಿದ ಪ್ರಕರಣದ ಪ್ರಮುಖ ಆರೋಪಿಒ ಸುರೇಶ್ ರಾಜ್ ತಲೆ ಮರೆಸಿಕೊಂಡಿದ್ದಾನೆ. ಆತ ನರೇಂದ್ರ ರೆಡ್ಡಿ ಅವರ ಬೆಂಬಲಿಗನಾಗಿದ್ದಾನೆ. ಆರೋಪಿ ಸುರೇಶ್ ಮತ್ತು ನರೇಂದ್ರ ರೆಡ್ಡಿ ನಡುವಿನ ಫೋನ್ ಕರೆಗಳ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.
Good to see that Indian citizens have a spine ! pic.twitter.com/O399qpQJPJ
— Dr Aniruddha Malpani, MD (@malpani) November 12, 2024
ಪ್ರಕರಣದಲ್ಲಿ ಈವರೆಗೆ ಪೊಲೀಸರು 55 ಮಂದಿಯನ್ನು ವಿಚಾರಣೆ ಒಳಪಡಿಸಿದ್ದಾರೆ. 16 ಮಂದಿಯನ್ನು ಬಂಧಿಸಿದ್ದಾರೆ. ಬೊಮ್ರಾಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.