ವಿಕಾರಾಬಾದ್‌ | ಜಿಲ್ಲಾಧಿಕಾರಿ ಮೇಲೆ ಹಲ್ಲೆ; ಮಾಜಿ ಶಾಸಕನ ಬಂಧನ

Date:

ಜಿಲ್ಲಾಧಿಕಾರಿ ಹಾಗೂ ಕೆಲ ಅಧಿಕಾರಿಗಳ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿ, ಹಲ್ಲೆಗೈದಿರುವ ಘಟನೆ ಆಂಧ್ರಪ್ರದೇಶದ ವಿಕಾರಾಬಾದ್‌ನಲ್ಲಿ ನಡೆದಿದೆ. ಪ್ರಕರಣದಲ್ಲಿ ಬಿಆರ್‌ಎಸ್ ಪಕ್ಷದ ಮಾಜಿ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ವಿಕಾರಾಬಾದ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ, ಕೆಲವರು ಜಿಲ್ಲಾಧಿಕಾರಿ ಮೇಲೆ ದಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ್ದಾರೆ. ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಾಜುಗಳನ್ನು ಪುಡಿ ಮಾಡಿದ್ದಾರೆ. ದಾಳಿಯ ಹಿಂದೆ ಕೊಡಂಗಲ್ ಕ್ಷೇತ್ರದ ಮಾಜಿ ಶಾಸಕ ನರೇಂದ್ರ ರೆಡ್ಡಿ ಅವರ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲಾಧಿಕಾರಿ ಮೇಲೆ ದಾಳಿ ನಡೆಸಿದ ಪ್ರಕರಣದ ಪ್ರಮುಖ ಆರೋಪಿಒ ಸುರೇಶ್‌ ರಾಜ್ ತಲೆ ಮರೆಸಿಕೊಂಡಿದ್ದಾನೆ. ಆತ ನರೇಂದ್ರ ರೆಡ್ಡಿ ಅವರ ಬೆಂಬಲಿಗನಾಗಿದ್ದಾನೆ. ಆರೋಪಿ ಸುರೇಶ್ ಮತ್ತು ನರೇಂದ್ರ ರೆಡ್ಡಿ ನಡುವಿನ ಫೋನ್‌ ಕರೆಗಳ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಪ್ರಕರಣದಲ್ಲಿ ಈವರೆಗೆ ಪೊಲೀಸರು 55 ಮಂದಿಯನ್ನು ವಿಚಾರಣೆ ಒಳಪಡಿಸಿದ್ದಾರೆ. 16 ಮಂದಿಯನ್ನು ಬಂಧಿಸಿದ್ದಾರೆ. ಬೊಮ್ರಾಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...