ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಆಂಧ್ರಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
ನಂದ್ಯಾಳ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿರುವ (ವೈಎಸ್‌ಆರ್‌ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರ ನಡೆಸಲು ನಟ ಅಲ್ಲು ಅರ್ಜುನ್ ಶನಿವಾರ ತೆರಳಿದ್ದರು.
ಈ ವೇಳೆ ಅಲ್ಲು ಅರ್ಜುನ್ ಅಭಿಮಾನಿಗಳೂ ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.
ಪೂರ್ವಾನುಮತಿ ಇಲ್ಲದೆ ಚುನಾವಣಾ ಸಮಯದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿಸುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?
ಲೋಕಸಭಾ ಚುನಾವಣೆಗೆ ಆಂಧ್ರಪ್ರದೇಶದಲ್ಲಿ ಸೋಮವಾರ (ಮೇ 13) ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ ನಟ ಅಲ್ಲು ಅರ್ಜುನ್ ಮತ್ತು ವೈಎಸ್‌ಆರ್‌ಸಿಪಿ ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ.