ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ | 2014ರಿಂದ ಈವರೆಗೆ 568 ದೂರು ದಾಖಲು, ಅಗ್ರ ಸ್ಥಾನದಲ್ಲಿ ಉತ್ತರ ಪ್ರದೇಶ

Date:

Advertisements

2014ರಿಂದ 2024-25ರ ನಡುವೆ ಅಂದರೆ ನರೇಂದ್ರ ಮೋದಿ ಪ್ರಧಾನಿ ಆದಾಗಿನಿಂದ ಈವರೆಗೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಸಂಬಂಧ ಸುಮಾರು 570 ದೂರುಗಳು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ (ಎನ್‌ಸಿಎಂ) ತಲುಪಿವೆ.

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದ ರಾಜ್ಯವಾರು ಪಟ್ಟಿಯಲ್ಲಿ ಉತ್ತರ ಪ್ರದೇಶ ಅಗ್ರ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ 11 ವರ್ಷಗಳ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ 251 ದೂರುಗಳು ದಾಖಲಾಗಿವೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

Advertisements

ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಕುರಿತು ಕೇಂದ್ರ ಸರ್ಕಾರವು ನಿರ್ದಿಷ್ಟವಾದ ದತ್ತಾಂಶವನ್ನು ಹೊಂದಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮಾರ್ಚ್‌ನಲ್ಲಿ ರಾಜ್ಯಸಭೆಗೆ ತಿಳಿಸಿದೆ.

ಎನ್‌ಸಿಎಂ ನಿರ್ದಿಷ್ಟ ದೂರುಗಳನ್ನು ಪರಿಶೀಲಿಸುತ್ತದೆ. ಅಂತಹ ಅರ್ಜಿಗಳನ್ನು ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲಾಗುತ್ತದೆ ಎಂದು ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಹೇಳಿದ್ದರು. ವಿಪಕ್ಷದ ಲಿಖಿತ ಪ್ರಶ್ನೆಗೆ ಉತ್ತರಿಸಿದ ರಿಜಿಜು, 11 ವರ್ಷಗಳಲ್ಲಿ 568 ದೂರುಗಳು ಎನ್‌ಸಿಎಂ ತಲುಪಿವೆ ಎಂದಿದ್ದಾರೆ.

ಕರ್ನಾಟಕ ಯಾವ ಸ್ಥಾನದಲ್ಲಿದೆ?

ಉತ್ತರ ಪ್ರದೇಶದಲ್ಲಿ 251 ದೂರುಗಳು ದಾಖಲಾಗಿದ್ದು ಮೊದಲ ಸ್ಥಾನದಲ್ಲಿದೆ. ದೆಹಲಿಯಲ್ಲಿ 80 ದೂರುಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿದೆ. ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ತಲಾ 33 ಪ್ರಕರಣಗಳು, ಕೇರಳದಲ್ಲಿ 20 ದೂರುಗಳು ದಾಖಲಾಗಿದೆ. ಈ ರಾಜ್ಯಗಳು ಮೊದಲ ಐದು ಸ್ಥಾನದಲ್ಲಿದೆ.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಲೈಂಗಿಕ ಅಲ್ಪಸಂಖ್ಯಾತರ ಕಾಯ್ದೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲು

2014-15 ಮತ್ತು 2024-25ರ ನಡುವೆ ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹತ್ತು ದೂರುಗಳು ದಾಖಲಾಗಿವೆ. 2023-24 ಮತ್ತು 2024-25ರಲ್ಲಿ, ಕರ್ನಾಟಕದಿಂದ ಯಾವುದೇ ದೂರುಗಳು ದಾಖಲಾಗಿಲ್ಲ ಎನ್ನಲಾಗಿದೆ. 2018-19ರಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಅತಿ ಹೆಚ್ಚು ಸಂಭವಿಸಿದೆ. ಎನ್‌ಸಿಎಂಗೆ 109 ದೂರುಗಳು ಬಂದಿವೆ. 2014-15ರಲ್ಲಿ 34, 2023-24ರಲ್ಲಿ 30, 2024-25ರಲ್ಲಿ 29 ದೂರುಗಳು ದಾಖಲಾಗಿವೆ.

2014ರಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ದೇಶದಲ್ಲಿ ಮುಸ್ಲಿಂ ದ್ವೇಷವನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. 2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರೇ ಹಲವು ಬಾರಿ ಮುಸ್ಲಿಂ ವಿರೋಧಿ ಭಾಷಣವನ್ನು ಮಾಡಿದ್ದಾರೆ. ಈ ಮೂಲಕ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ. ಓರ್ವ ಆರೋಪಿ ಮುಸ್ಲಿಂ ಆಗಿದ್ದರೆ ಆತನ ಮನೆಯನ್ನು ಕೆಡವುವ ಬುಲ್ಡೋಜರ್ ನ್ಯಾಯ ಉತ್ತರ ಪ್ರದೇಶದಲ್ಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X