ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

Date:

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು ಹಿಡಿದು ವಾಹನಗಳ ಮೇಲೆ ದಾಳಿ ನಡೆಸಿದ್ದು, ಅಂಗಡಿಗಳಿಗೂ ಬೆಂಕಿ ಹಚ್ಚಿದೆ.

- Advertisement -

ಮಹಾರಾಜ್‌ಗಂಜ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಜನರ ವಾಸಿಸುವ ಮನ್ಸೂರ್‌ ಪ್ರದೇಶದಲ್ಲಿ ಹಿಂದು ಸಮುದಾಯವು ದುರ್ಗಾ ದೇವಿ ಮೆರವಣಿಗೆ ನಡೆಸಿದೆ. ಈ ವೇಳೆ, ಉದ್ದೇಶಪೂರ್ವಕವಾಗಿ ಡಿ.ಜೆ ಸೌಂಡ್‌ ಜಾಸ್ತಿ ಮಾಡಿ, ಗದ್ದಲ ಸೃಷ್ಟಿಸಿದೆ. ಇದನ್ನು ಮುಸ್ಲಿಂ ಸಮುದಾಯದ ಮುಖಂಡರು ಪ್ರಶ್ನಿಸಿದ್ದಾರೆ. ಆ ಕಾರಣಕ್ಕಾಗಿಯೇ ಎರಡೂ ಸಮುದಾಯದ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗಲಾಟೆ ವೇಳೆ, ಕಲ್ಲು ತೂರಾಟವೂ ನಡೆದಿದ್ದು, ದುರ್ಗಾ ದೇವಿ ಪ್ರತಿಮೆಗೂ ಹಾನಿಯಾಗಿದೆ. ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ರಾಮ್‌ ಗೋಪಾಲ್‌ ಮಿಶ್ರಾ ಎಂಬ ಯುವಕ ಸಾವನ್ನಪ್ಪಿದ್ದಾರೆ. ಯುವಕನ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೋಮು ಹಿಂಸಾಚಾರ ಭುಗಿಲೆದ್ದಿದೆ.

ಹಿಂಸಾಚಾರ ಪ್ರಕರಣದಲ್ಲಿ ಎರಡೂ ಸಮುದಾಯದ 25 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹಾರ್ದಿ ಪೊಲೀಸ್‌ ಠಾಣಾಧಿಕಾರಿ ಸೇರಿದಂತೆ ಇಬ್ಬರನ್ನು ಯೋಗಿ ಸರ್ಕಾರ ಅಮಾನತುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...