ಹಸೀನಾ ತಾಯ್ನಾಡಿಗೆ ಮರಳಿದರೆ ಜೈಲು ಖಂಡಿತ: ಬಾಂಗ್ಲಾ ಸರ್ಕಾರದ ಎಚ್ಚರಿಕೆ ಬೆನ್ನಲ್ಲೇ ಭುಗಿಲೆದ್ದ ಹಿಂಸೆ!

Date:

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಬಾಂಗ್ಲಾದೇಶ ಸರ್ಕಾರ ಅವರಿಗೆ ಖಡಕ್ ಎಚ್ಚರಿಕೆ ರವಾನಿಸಿದೆ. ಹಸೀನಾ ಅವರು ದೇಶಕ್ಕೆ ಕಾಲಿಟ್ಟ ತಕ್ಷಣವೇ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗುವುದು ಎಂದು ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಾಮಾ ಒಬೇದ್ ಇಸ್ಲಾಂ ಸ್ಪಷ್ಟಪಡಿಸಿದ್ದಾರೆ.

- Advertisement -

2024ರ ಆಗಸ್ಟ್‌ನಲ್ಲಿ ನಡೆದ ಭಾರಿ ಜನತಾ ದಂಗೆಯ ನಂತರ ಪದಚ್ಯುತಗೊಂಡು ಭಾರತಕ್ಕೆ ಪಲಾಯನ ಮಾಡಿದ್ದ ಹಸೀನಾ, ಇದೀಗ ಡಿಸೆಂಬರ್‌ನಲ್ಲಿ ಮರಳುವ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಅವರು ಹೊಸ ಪಾಸ್‌ಪೋರ್ಟ್ ಮತ್ತು ಗುರುತಿನ ಚೀಟಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಗ್ಲಾ ಸರ್ಕಾರ ಈಗಾಗಲೇ ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅರಬ್ ಜನಾದೇಶ ಬದಿಗಿಟ್ಟು ನೆತನ್ಯಾಹು ಕೈಹಿಡಿಯಲು ಹೊರಟ ಐಸೆನ್‌ಕೋಟ್;...

ಇಸ್ರೇಲ್‌ನ ತ್ರಿಶಂಕು ಸಂಸತ್ತಿನಲ್ಲಿ ಅಧಿಕಾರ ಹಿಡಿಯಲು ವಿರೋಧ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ತಮ್ಮ ಮಾತನ್ನೇ ನುಂಗಿ ಹಂಗಾಮಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೈತ್ರಿ ಮಾತುಕತೆಗೆ ಮುಂದಾಗಿದ್ದಾರೆ. 19 ಸ್ಥಾನ ಗೆದ್ದ...

ಸುದ್ದಿಸಂಸ್ಥೆ ‘ರಾಯಿಟರ್ಸ್’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಚಿವ ಒಬೇದ್, “ಹಸೀನಾ ಬಾಂಗ್ಲಾದೇಶವನ್ನು ಪ್ರವೇಶಿಸಲು ಪ್ರಯತ್ನಿಸಿದ ತಕ್ಷಣ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುವುದು. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ,” ಎಂದಿದ್ದಾರೆ. ಅಲ್ಲದೆ, ಅಸ್ತಿತ್ವದಲ್ಲಿರುವ ಗಡಿಪಾರು ಒಪ್ಪಂದವನ್ನು ಗೌರವಿಸಿ, ಶಿಕ್ಷೆಗೊಳಗಾಗಿರುವ ಹಸೀನಾ ಅವರನ್ನು ಭಾರತವು ಬಾಂಗ್ಲಾದೇಶಕ್ಕೆ ಹಸ್ತಾಂತರಿಸಬೇಕು ಎಂದು ಢಾಕಾ ನಿರೀಕ್ಷಿಸುತ್ತಿದೆ.

ಕಳೆದ ಏಪ್ರಿಲ್‌ನಲ್ಲಿ ಬಾಂಗ್ಲಾದೇಶದ ಗಡಿಪಾರು ಮನವಿಯನ್ನು ಪರಿಶೀಲಿಸುತ್ತಿರುವುದಾಗಿ ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿತ್ತು. ಹಸೀನಾ ಅವರನ್ನು ಕರೆತರಲು ವಿಮಾನ ಕಳುಹಿಸುವ ಬಗ್ಗೆ ಭಾರತದೊಂದಿಗೆ ಯಾವುದೇ ಅಧಿಕೃತ ಚರ್ಚೆ ನಡೆದಿಲ್ಲ ಎಂದಿರುವ ಒಬೇದ್, “ಬಾಂಗ್ಲಾದೇಶದ ಘನತೆ, ಸ್ವಾಭಿಮಾನ ಮತ್ತು ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಭಾರತದೊಂದಿಗೆ ಸಮತೋಲಿತ ಸಂಬಂಧವನ್ನು ನಾವು ಬಯಸುತ್ತೇವೆ. ಬಾಂಗ್ಲಾದೇಶದ ವಿಚಾರದಲ್ಲಿ ಯಾವ ರೀತಿಯ ವಿದೇಶಾಂಗ ನೀತಿ ಅನುಸರಿಸಬೇಕು ಎಂಬುದನ್ನು ಭಾರತವೇ ನಿರ್ಧರಿಸಬೇಕು,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 2024ರ ದಂಗೆಯಲ್ಲಿ ಸುಮಾರು 1,400 ಜನರು ಮೃತಪಟ್ಟಿದ್ದರು ಎಂದು ವಿಶ್ವಸಂಸ್ಥೆ ಹೇಳಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಸೀನಾ ಅವರಿಗೆ ಬಾಂಗ್ಲಾದೇಶದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ ಮತ್ತು ಅವರ ‘ಅವಾಮಿ ಲೀಗ್’ ಪಕ್ಷವನ್ನು ನಿಷೇಧಿಸಲಾಗಿದೆ.

ಹಸೀನಾ ಅವರ ವಾಪಸಾತಿ ವಿಚಾರವು ಬಾಂಗ್ಲಾದೇಶದಲ್ಲಿ ರಾಜಕೀಯ ಉದ್ವಿಗ್ನತೆ ಮತ್ತು ಹಿಂಸಾಚಾರಕ್ಕೆ ಕಾರಣವಾಗಿದೆ. ಹಸೀನಾ ಅವರ ಮರಳುವಿಕೆಯನ್ನು ಬೆಂಬಲಿಸಿ ನಿಷೇಧಿತ ಅವಾಮಿ ಲೀಗ್ ಬೆಂಬಲಿಗರು ಈ ತಿಂಗಳು ಒಂದು ವಾರಗಳ ಕಾಲ ಪ್ರತಿಭಟನೆ ನಡೆಸಿದ್ದು, ನವೆಂಬರ್ 19ರಂದು ದೇಶವ್ಯಾಪಿ ಬಂದ್‌ಗೆ ಕರೆ ನೀಡಿದ್ದರು. ಕಳೆದ 10 ದಿನಗಳಲ್ಲಿ ಕನಿಷ್ಠ 28 ಜಿಲ್ಲೆಗಳಲ್ಲಿ ಕಚ್ಚಾ ಬಾಂಬ್ ಸ್ಫೋಟಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿದ್ದು, ಹಲವು ಪೊಲೀಸರು ಹಾಗೂ ನಾಗರಿಕರು ಗಾಯಗೊಂಡಿದ್ದಾರೆ.

ಈ ಹಿಂಸಾಚಾರವನ್ನು “ರಾಜಕೀಯವಾಗಿ ದಿವಾಳಿಯಾಗಿರುವ ಪಕ್ಷದ ಅಸ್ತಿತ್ವದ ತಂತ್ರ” ಎಂದು ಸಚಿವ ಒಬೇದ್ ಟೀಕಿಸಿದ್ದಾರೆ. ಆದರೆ, ಪ್ರಸ್ತುತ ಆಡಳಿತವೇ ಈ ಹಿಂಸಾಚಾರಕ್ಕೆ ನೇರ ಹೊಣೆ ಎಂದು ಅವಾಮಿ ಲೀಗ್‌ನ ಹಿರಿಯ ನಾಯಕ ಖಾಲಿದ್ ಮಹಮೂದ್ ಚೌಧರಿ ಪ್ರತ್ಯಾರೋಪ ಮಾಡಿದ್ದಾರೆ.

ಇದೇ ವೇಳೆ, 2017ರಲ್ಲಿ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ಮೇಲೆ ಮ್ಯಾನ್ಮಾರ್ ಭದ್ರತಾ ಪಡೆಗಳು ನಡೆಸಿದ ಹತ್ಯಾಕಾಂಡ ಮತ್ತು ಲೈಂಗಿಕ ದೌರ್ಜನ್ಯವು ‘ರಾಜ್ಯ ಪ್ರಾಯೋಜಿತ ನರಮೇಧ’ ಎಂದು ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯ (ICJ) ತೀರ್ಪು ನೀಡಿರುವುದನ್ನು ಬಾಂಗ್ಲಾದೇಶ ಸ್ವಾಗತಿಸಿದೆ.

ಈ ತೀರ್ಪನ್ನು ಮುಂದಿಟ್ಟುಕೊಂಡು, ಬಾಂಗ್ಲಾದೇಶದಲ್ಲಿ ಆಶ್ರಯ ಪಡೆದಿರುವ ಸುಮಾರು 12 ಲಕ್ಷ ರೋಹಿಂಗ್ಯಾ ನಿರಾಶ್ರಿತರನ್ನು ಸುರಕ್ಷಿತವಾಗಿ ಮತ್ತು ಗೌರವಯುತವಾಗಿ ವಾಪಸ್ ಕರೆಸಿಕೊಳ್ಳುವಂತೆ ಮ್ಯಾನ್ಮಾರ್ ಮೇಲೆ ಢಾಕಾ ರಾಜತಾಂತ್ರಿಕ ಒತ್ತಡವನ್ನು ಹೆಚ್ಚಿಸಿದೆ. ಮ್ಯಾನ್ಮಾರ್‌ನ ಅಂತರ್ಯುದ್ಧ ಮತ್ತು ರಾಖೈನ್ ರಾಜ್ಯದ ಮೇಲೆ ‘ಅರಾಕನ್ ಆರ್ಮಿ’ ಬಂಡುಕೋರರ ಹಿಡಿತದಿಂದಾಗಿ ನಿರಾಶ್ರಿತರ ವಾಪಸಾತಿ ಕಗ್ಗಂಟಾಗಿದೆ. “ಈ ಬಿಕ್ಕಟ್ಟನ್ನು ಸೃಷ್ಟಿಸಿದ್ದು ಮ್ಯಾನ್ಮಾರ್, ಬಾಂಗ್ಲಾದೇಶವಲ್ಲ. ಆದ್ದರಿಂದ ಮ್ಯಾನ್ಮಾರ್ ಮತ್ತು ಅರಾಕನ್ ಆರ್ಮಿ ಮೇಲೆ ಅಂತಾರಾಷ್ಟ್ರೀಯ ಸಮುದಾಯ ಹೆಚ್ಚಿನ ಒತ್ತಡ ಹೇರಬೇಕು,” ಎಂದು ಒಬೇದ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

FSSAI ಕಾನೂನು ಕ್ರಮದ ಬೆನ್ನಲ್ಲೇ ‘ನಮ್ಮ ಕುಡಿಯುವ ನೀರು ಸಂಪೂರ್ಣ ಸುರಕ್ಷಿತ’ ಎಂದ ಬಿಸ್ಲೆರಿ

ಬಿಸ್ಲೆರಿ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು "ಅಸುರಕ್ಷಿತ"...

ಕಚೇರಿ, ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಕೆ ಬೇಡ: ಕೇಂದ್ರ ಸರ್ಕಾರದ ಎಚ್ಚರಿಕೆ

ಕಚೇರಿ, ಹಂಚಿಕೆಯ ಅಥವಾ ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವಾಗ ಎಚ್ಚರಿಕೆ...

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ ಯಾರೂ ಇಲ್ಲ’; ಆಶಾ ಅಳಲು

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ,...

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ : ಸಚಿವ ಮಧು ಬಂಗಾರಪ್ಪ

ರಾಜ್ಯದ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ...