ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

Date:

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ ಸಂಗ್ರಹಿಸಲು ಹೋಗಿದ್ದ 14 ಮಂದಿ ಮೈತೇಯಿ ಸಮುದಾಯದವರ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಈ ಅಮಾನುಷ ಹತ್ಯೆಯನ್ನು ಖಂಡಿಸಿ ಮಣಿಪುರದಲ್ಲಿ ಬುಧವಾರ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದು, ರಾಜಧಾನಿ ಇಂಫಾಲದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ಸಂಭವಿಸಿದೆ.

- Advertisement -

​ಇಂಫಾಲದ ಖುಮನ್ ಲಂಪಕ್ ಕ್ರೀಡಾ ಸಂಕೀರ್ಣದಲ್ಲಿ ಮಣಿಪುರದ ಮೊದಲ ಪೂಮ್ಸೆ ಟೇಕ್ವಾಂಡೋ ಚಾಂಪಿಯನ್‌ಷಿಪ್ ಆಯೋಜಿಸಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಮತ್ತು ರಾಜ್ಯ ಗೃಹ ಸಚಿವ ಗೋವಿಂದಾಸ್ ಕೊಂತೌಜಮ್ ಪಾಲ್ಗೊಂಡಿದ್ದರು. ಈ ವೇಳೆ ಅಲ್ಲಿಗೆ ಧಾವಿಸಿದ ಅಪಾರ ಸಂಖ್ಯೆಯ ಮಹಿಳಾ ಪ್ರತಿಭಟನಾಕಾರರು, ರಾಜ್ಯದಲ್ಲಿ ಅಮಾಯಕರು ಹತ್ಯೆಯಾಗುತ್ತಿರುವಾಗ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿ ಕ್ರೀಡಾ ಸಂಕೀರ್ಣದೊಳಗೆ ನುಗ್ಗಲು ತೀವ್ರ ಯತ್ನ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

​ದಕ್ಷಿಣ ಕೊರಿಯಾದ ಪ್ರತಿನಿಧಿಗಳು ಸಹ ಭಾಗವಹಿಸಿದ್ದ ಈ ಪ್ರತಿಷ್ಠಿತ ಕ್ರೀಡಾಕೂಟದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ, ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹಲವು ಸುತ್ತು ಅಶ್ರುವಾಯು ಸಿಡಿಸಿದರು. ಪೊಲೀಸರ ಈ ಕಾರ್ಯಾಚರಣೆ ಹಾಗೂ ಉಂಟಾದ ನೂಕಾಟ-ತಳ್ಳಾಟದ ಘರ್ಷಣೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Advertisements

​ಇದರ ಬೆನ್ನಲ್ಲೇ, ಇಂಫಾಲ್ ಪೂರ್ವ ಜಿಲ್ಲೆಯ ಖಬೆಸೊಯ್ ಎಂಬಲ್ಲಿ ನಡೆದ ಮತ್ತೊಂದು ಪ್ರತಿಭಟನೆಯಲ್ಲಿ ಗೃಹ ಸಚಿವರು ಹಾಗೂ ರಾಜ್ಯಸಭಾ ಸಂಸದೆ ಎ. ಶಾರದಾ ದೇವಿ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಹತ್ಯೆಗಳ ಬಗ್ಗೆ ಶಾರದಾ ದೇವಿ ಅವರ ಮೌನವನ್ನು ಪ್ರಶ್ನಿಸಿ ‘ಮೈರಾ ಪೈಬಿ’ (ಮಹಿಳಾ ಕಾರ್ಯಕರ್ತೆಯರು) ಗುಂಪು ಬ್ರಹ್ಮಪುರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಿತು. ಬಳಿಕ ವಿಡಿಯೊ ಕರೆ ಮೂಲಕ ಮಾತನಾಡಿದ ಸಂಸದೆ, ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದ ಬಳಿಕವಷ್ಟೇ ಪ್ರತಿಭಟನಾಕಾರರು ಅಲ್ಲಿಂದ ನಿರ್ಗಮಿಸಿದರು.

​ಹತ್ಯೆ ಖಂಡಿಸಿ ‘ನೇಟಿವ್ ಪೀಪಲ್ ಕಮಿಟಿ ಮಣಿಪುರ’ ಸಂಘಟನೆಯು ಮಂಗಳವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಬಂದ್‌ಗೆ ಕರೆ ನೀಡಿದ್ದು, ಇಂಫಾಲ್ ಕಣಿವೆಯ ಐದೂ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಾರುಕಟ್ಟೆಗಳು ಮುಚ್ಚಿದ್ದು, ಸಾರ್ವಜನಿಕ ಸಾರಿಗೆ ರಸ್ತೆಗಿಳಿದಿಲ್ಲ. ಇದೇ ವೇಳೆ, ತೌಬಲ್ ಜಿಲ್ಲೆಯ ಪೆಚಿ ಗ್ರಾಮದ ಬಳಿ ಬಂದ್ ಬೆಂಬಲಿಗರೆಂದು ಹೇಳಿಕೊಂಡ ದುಷ್ಕರ್ಮಿಗಳು ನಾಲ್ವರು ದಿನಗೂಲಿ ನೌಕರರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬರಿಗೆ ಗಾಯಗಳಾಗಿವೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನೂ ರಕ್ಷಿಸಿ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

​ಮಣಿಪುರದಲ್ಲಿ ಕಣಿವೆ ಆಧಾರಿತ ಮೈತೇಯಿ ಹಾಗೂ ಗುಡ್ಡಗಾಡು ಆಧಾರಿತ ಕುಕಿ ಸಮುದಾಯಗಳ ನಡುವೆ ಮೇ 2023 ರಿಂದ ನಡೆಯುತ್ತಿರುವ ಜನಾಂಗೀಯ ಸಂಘರ್ಷವು ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಈವರೆಗೆ ಕನಿಷ್ಠ 306 ಮಂದಿ ಬಲಿಯಾಗಿದ್ದಾರೆ ಹಾಗೂ ಹಲವರು ನಾಪತ್ತೆಯಾಗಿದ್ದಾರೆ. ಇದಲ್ಲದೆ, ಈ ವರ್ಷದ ಫೆಬ್ರವರಿಯಿಂದ ರಾಜ್ಯದಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳ ನಡುವೆ ನಡೆಯುತ್ತಿರುವ ಪ್ರತ್ಯೇಕ ಘರ್ಷಣೆಗಳಲ್ಲಿಯೂ ಸುಮಾರು 50 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...