ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

Date:

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ಸೈತು-ಗಮ್ಫಾಜೋಲ್ ಉಪವಿಭಾಗಕ್ಕೆ ಸೇರಿದ ‘ಲೋಯ್ಬೋಲ್ ಖುಲ್ಲೆನ್’ ಎಂಬ ಕುಕಿ ಸಮುದಾಯದವರ ಸಣ್ಣ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ನಸುಕಿನ 4 ಗಂಟೆಯ ಸುಮಾರಿಗೆ ಅಪರಿಚಿತ ಬಂದೂಕುಧಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

- Advertisement -

ಈ ಭೀಕರ ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಕುಕಿ ಮೂಲದ ಗ್ರಾಮಸ್ಥರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಕೋರರು ಗ್ರಾಮದ 7 ಮನೆಗಳಿಗೆ ಬೆಂಕಿ ಹಚ್ಚಿದ್ದು, ವ್ಯಾಪಕ ಆಸ್ತಿಪಾಸ್ತಿ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನೂ ಓದಿ: ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಇಡೀ ಪ್ರದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡಿವೆ. ದಾಳಿಕೋರರ ಪತ್ತೆಗಾಗಿ ಪ್ರಸ್ತುತ ಬೃಹತ್ ಶೋಧ ಕಾರ್ಯಚರಣೆ ಮುಂದುವರಿದಿದೆ.

ಮಣಿಪುರ ಮುಖ್ಯಮಂತ್ರಿ ಯುವನಮ್ ಖೇಮ್‌ಚಂದ್ ಸಿಂಗ್ ಈ ಹಿಂಸಾಚಾರವನ್ನು ಕಟುವಾಗಿ ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಕುಕಿ ಇನ್‌ಪಿ ಮಣಿಪುರ (KIM) ಸಂಘಟನೆಯು ಕೇಂದ್ರ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ತಕ್ಷಣವೇ ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...