ಪಶ್ಚಿಮ ಬಂಗಾಳ | ಮೊದಲ ಹಂತದ ಚುನಾವಣೆಯಲ್ಲಿ ಹಿಂಸಾಚಾರ, ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ

Date:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಹಲವಾರು ಜಿಲ್ಲೆಗಳಲ್ಲಿ ಹಿಂಸಾಚಾರ ನಡೆದಿದೆ. ದಕ್ಷಿಣ ದಿನಾಜ್‌ಪುರದ ಕುಮಾರ್‌ಗಂಜ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುಭೇಂದು ಸರ್ಕಾರ್ ಮೇಲೆ ಹಲ್ಲೆ ನಡೆದಿದೆ.

- Advertisement -

ಗುರುವಾರ ಮುಂಜಾನೆ ಕುಮಾರ್‌ಗಂಜ್‌ನ ಬೂತ್ ಸಂಖ್ಯೆ 24ರ ಬಳಿ ಬಿಜೆಪಿಯ ಮತಗಟ್ಟೆ ಏಜೆಂಟ್ ಅನ್ನು ಬೂತ್‌ಗೆ ಪ್ರವೇಶಿಸದಂತೆ ತಡೆಯಲಾಗಿದೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಇದರ ಮಾಹಿತಿ ಪಡೆದ ಸರ್ಕಾರ್ ಸ್ಥಳಕ್ಕೆ ಧಾವಿಸಿದಾಗ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ : ಹಿಂಸಾಚಾರಕ್ಕೆ 12 ಮಂದಿ ಬಲಿ

ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ನನ್ನನ್ನು ವಾಹನದಿಂದ ಹೊರಗೆಳೆದು ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ನನ್ನ ವಾಹನವನ್ನೂ ಧ್ವಂಸಗೊಳಿಸಲಾಗಿದೆ. ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಯಿತು ಎಂದು ಸರ್ಕಾರ್ ಆರೋಪಿಸಿದ್ದಾರೆ. ಸದ್ಯ ಚುನಾವಣಾ ಆಯೋಗವು ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಕುಮಾರ್‌ಗಂಜ್‌ನಲ್ಲಿ ಮಾತ್ರ ಹಿಂಸಾಚಾರ ನಡೆದಿರುವುದಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಚುನಾವಣಾ ಹಿಂಸಾಚಾರ ನಡೆದಿದೆ. ಬಿರ್ಭುಮ್ ಜಿಲ್ಲೆಯ ಲಬ್‌ಪುರದ ಭ್ರಮರ್‌ಕೋಲ್ ಗ್ರಾಮದಲ್ಲಿ, ಬಿಜೆಪಿ ಮತಗಟ್ಟೆ ಏಜೆಂಟ್ ಬಿಸ್ವಜಿತ್ ಮಂಡಲ್ ಅವರ ಮೇಲೆ ರಾಡ್ ಮತ್ತು ಕೋಲುಗಳಿಂದ ಹಲ್ಲೆ ನಡೆಸಲಾಗಿದೆ. ತಲೆಗೆ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಇನ್ನೊಂದೆಡೆ ಕೂಚ್ ಬೆಹಾರ್ ಜಿಲ್ಲೆಯ ಮಠಭಂಗದಲ್ಲಿ ಬಿಜೆಪಿ ಅಭ್ಯರ್ಥಿ ನಿಶಿತ್ ಪ್ರಮಾಣಿಕ್ ಮತದಾರರಿಗೆ ನಗದು ವಿತರಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಇಂದು ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಈ ಹಿಂಸಾಚಾರ, ಗೊಂದಲಗಳ ನಡುವೆಯೂ ಮತದಾರರ ಸಂಖ್ಯೆ ಗಮನಾರ್ಹವಾಗಿದೆ. ಸಂಜೆ 5 ಗಂಟೆಯವರೆಗೆ 89.93% ಮತದಾನ ದಾಖಲಾಗಿದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಶೇ. 82.30 ರಷ್ಟು ಮತದಾನ ದಾಖಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...