ಮಹಿಳೆಗೆ ಮುತ್ತು ನೀಡಿದ ಬಿಜೆಪಿ ಸಂಸದನ ವಿಡಿಯೋ ವೈರಲ್: ವಿಪಕ್ಷಗಳ ಆಕ್ರೋಶ

Date:

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೆನ್ನೆಗೆ ಮುತ್ತು ನೀಡಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಖಗೇನ್ ಮುರ್ಮು ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ವಿಡಿಯೋ ಸ್ಕ್ರೀನ್‌ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಟಿಎಂಸಿ ಇದು ಬಿಜೆಪಿ ನಾಯಕರ ಮಹಿಳಾ ವಿರೋಧಿ ನಡೆ ಎಂದು ವಾಗ್ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನೀವು ನೋಡಿದನ್ನು ನಂಬಲು ಸಾಧ್ಯವಿಲ್ಲ, ನಾವು ಇದನ್ನು ಸ್ಪಷ್ಟಪಡಿಸಿಕೊಳ್ಳೋಣ. ಹೌದು ಇದು ಬಿಜೆಪಿ ಸಂಸದ ಹಾಗೂ ಉತ್ತರ ಮಲ್‌ದಾಹ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಖಗೇನ್ ಮುರ್ಮು ತಮ್ಮ ಪ್ರಚಾರದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಮುತ್ತು ನೀಡುತ್ತಿದ್ದಾರೆ. ಇವರು ಒಂದು ವೇಳೆ ಅಧಿಕಾರಕ್ಕೆ ಬಂದರೆ ಹೇಗಿರಬೇಕೆಂದು ಊಹಿಸಿ” ಎಂದು ಟಿಎಂಸಿ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ಖಗೇನ್ ಮುರ್ಮು, ಮಗುವಿಗೆ ಮುತ್ತು ನೀಡಿದರೆ ಯಾವುದೇ ತಪ್ಪು ಉಂಟಾಗುವುದಿಲ್ಲ. ಇದು ಸಂಪೂರ್ಣ ಟಿಎಂಸಿಯ ಪಿತೂರಿ. ಅವರು ಇಂತಹ ಕೆಟ್ಟ ನಡವಳಿಕೆಗಳನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಮುತ್ತು ನೀಡಿರುವ ಬಗ್ಗೆ ಮಹಿಳೆ ಕೂಡ ಮಾತನಾಡಿದ್ದು, ವ್ಯಕ್ತಿಯೊಬ್ಬರು ತನ್ನ ಸ್ವಂತ ಮಗಳ ರೀತಿಯಲ್ಲಿ ಮುತ್ತು ನೀಡಿದರೆ ಏನು ಸಮಸ್ಯೆಯಾಗುತ್ತದೆ? ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಘಟನೆಗಳನ್ನು ವೈರಲ್‌ ಮಾಡುವವರು ಕೆಟ್ಟ ಮನಸ್ಥಿತಿ ಹೊಂದಿರುತ್ತಾರೆ. ಮುತ್ತು ನೀಡಿದ ಫೋಟೋ ತೆಗೆಯುವಾಗ ನನ್ನ ತಂದೆ ತಾಯಿ ಕೂಡ ಸ್ಥಳದಲ್ಲಿದ್ದರು ಎಂದು ತಿಳಿಸಿದ್ದಾರೆ.

ಸಿಪಿಎಂನ ಮಾಜಿ ಶಾಸಕರಾದ ಮುರ್ಮು 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಸದರಾಗಿ ಆಯ್ಕೆಯಾಗಿದ್ದರು. ಈಗ ಎರಡನೇ ಬಾರಿ ಸ್ಪರ್ಧೆಗೆ ಇಳಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...