ಮೋದಿ ಜೊತೆಗಿನ ಸಂವಾದದಲ್ಲಿ ‘ಅಹಂಕಾರ’ವನ್ನು ಉಲ್ಲೇಖಿಸಿದ್ದ ವಿರಾಟ್ ಕೊಹ್ಲಿ; ವೈರಲ್‌ ಆಗಿತ್ತು ಈ ವಿಡಿಯೋ

Date:

2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ ‘ಅಹಂಕಾರ’ ಪದವನ್ನು ಉಲ್ಲೇಖಿಸಿದ್ದರು. ಆಟಗಳ ಬಗ್ಗೆ ಕೊಹ್ಲಿ ಆಡಿರುವ ಮಾತುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಹೇಳಿದಂತೆ ಭಾಸವಾಗಿತ್ತು. ಆ ವಿಡಿಯೋ ಆಗ ವೈರಲ್‌ ಆಗಿತ್ತು. ಇದೀಗ, ಐಪಿಎಲ್‌ ಪಂದ್ಯಾವಳಿಗಳು ನಡೆಯುತ್ತಿರುವ ಸಮಯದಲ್ಲಿ ಆ ವಿಡಿಯೋ ಮತ್ತೆ ಮುನ್ನೆಲೆ ಬಂದಿದೆ.

- Advertisement -

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಸಮಯದಲ್ಲಿ ಬೆರಿಲ್ ಚಂಡಮಾರುತ ಅಪ್ಪಳಿಸಿತ್ತು. ಪರಿಣಾಮ, ಟೀಂ ಇಂಡಿಯಾ ಭಾರತಕ್ಕೆ ಮರಳಲಾಗದೆ ಬಾರ್ಬಡೋಸ್‌ನಲ್ಲಿಯೇ ಸಿಲುಕಿಕೊಂಡಿತ್ತು. ಕೆಲ ದಿನಗಳ ಬಳಿ ಭಾರತ ತಂಡ ಬಾರ್ಬಡೋಸ್‌ನಿಂದ ದೆಹಲಿಗೆ ಬಂದಿಳಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ ಶಾ ಜೊತೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ಟೀಮ್‌ ಇಂಡಿಯಾ ಆಟಗಾರರು ಸಂವಾದ ನಡೆಸಿದ್ದರು. ಈ ಸಂವಾದದ ಪೂರ್ಣ ವಿಡಿಯೋವನ್ನು ಶುಕ್ರವಾರ ಸಂಜೆ ಯೂಟ್ಯೂಬ್‌ನಲ್ಲಿ ಖುದ್ದು ಪ್ರಧಾನಿ ಮೋದಿಯೇ ಬಿಡುಗಡೆಗೊಳಿಸಿದ್ದರು.

ಈ ಸಂವಾದದ ವೇಳೆ ಮಾತನಾಡಿದ್ದ ವಿರಾಟ್‌ ಕೊಹ್ಲಿ, “ನಾನು ಏನು ಮಾಡಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗುತ್ತಿರಲಿಲ್ಲ. ನಾನು ಮಾಡುತ್ತೇನೆ ಎಂದು ನಮಗೆ ಅನಿಸಿದರೆ ನಮ್ಮ ಅಹಂಕಾರ ಹೆಚ್ಚಾಗುತ್ತದೆ. ಆಗ ಆಟ ನಮ್ಮ ಕೈತಪ್ಪಿ ಹೋಗುತ್ತದೆ. ಅಹಂಕಾರವನ್ನೇ ಬಿಡಬೇಕಾಗುತ್ತದೆ” ಎಂದು ಹೇಳಿದ್ದರು.

“ಆಟದ ಸ್ಥಿತಿ ಹಾಗೆಯೇ ಇತ್ತು. ನನಗೆ ನನ್ನ ಅಹಂಕಾರವನ್ನು ತೋರಿಸಲು ಅವಕಾಶವೇ ಇರಲಿಲ್ಲ. ತಂಡಕ್ಕಾಗಿ ನನ್ನ ಅಹಂಕಾರವನ್ನು ನಾನು ಬದಿಗೊತ್ತಬೇಕಾಗಿತ್ತು” ಎಂದು ತಿಳಿಸಿದ್ದರು.

ಸದ್ಯ ಈ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, “ವಿರಾಟ್ ಕೊಹ್ಲಿ ಪರೋಕ್ಷವಾಗಿ ಪ್ರಧಾನಿ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆಯೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದರು.

“ಆ ಅಹಂಕಾರದಿಂದಾಗಿಯೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬರು (ನರೇಂದ್ರ ಮೋದಿ) 303 ಸ್ಥಾನದಿಂದ 240ಕ್ಕೆ ಇಳಿದಿದ್ದಾರೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದರೆ, “ಇನ್ನೊಬ್ಬರನ್ನು ಪರೋಕ್ಷವಾಗಿ ರೋಸ್ಟ್ ಮಾಡುವ ಪ್ರತಿಭೆ ಕೊಹ್ಲಿಗೆ ಇದೆ ಎಂದು ನನಗೆ ತಿಳಿದಿರಲಿಲ್ಲ” ಎಂದು ಮತ್ತೋರ್ವ ನೆಟ್ಟಿಗರು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...