ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದ ವಿರಾಟ್‌ ಕೊಹ್ಲಿ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪು

Date:

Advertisements

ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್‌ ಆಡಿದ್ದರು ಎಂದು ಹೇಳಿದ್ದಾರೆ.

ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ತೇಜಸ್ವಿ ಯಾದವ್‌, ಸ್ಥಳೀಯ ಮಟ್ಟದಲ್ಲಿ ಈಗಿನ ಭಾರತ ತಂಡದ ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದರು. ನನ್ನ ತಂಡದಲ್ಲಿ ಸ್ಟಾರ್ ಆಟಗಾರರಿದ್ದರೂ ನನ್ನ ಕ್ರಿಕೆಟ್ ಜೀವವವನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ತಮ್ಮ ಎರಡೂ ಕಾಲುಗಳಿಗೆ ಗಾಯವಾದ ಕಾರಣ ಕ್ರಿಕೆಟ್‌ಗೆ ವಿದಾಯ ಹೇಳಬೇಕಾಯಿತು ಎಂದು ತಿಳಿಸಿದ್ದಾರೆ.

ಭಾರತ ತಂಡದಲ್ಲಿ ಆಡಿರುವ ಬಹುತೇಕ ಸ್ಟಾರ್‌ ಆಟಗಾರರು ನನ್ನ ಕ್ರಿಕೆಟ್ ಸಹಪಾಠಿಗಳು. ನಾನು ಕ್ರಿಕೆಟಿಗನಾಗಿದ್ದರೂ ಹಾಗೂ ವಿರಾಟ್‌ ನನ್ನ ತಂಡದಲ್ಲಿ ಆಡಿದ್ದರೂ ಯಾರೊಬ್ಬರು ಈ ಬಗ್ಗೆ ಮಾತನಾಡುವುದಿಲ್ಲ. ಕ್ರಿಕೆಟ್ ವೃತ್ತಿಪರನಾಗಿ ನಾನು ಉತ್ತಮವಾಗಿ ಕ್ರಿಕೆಟ್ ಆಡುತ್ತಿದೆ. ದೆಹಲಿಯ ಅಂಡರ್-15 ಮತ್ತು ನಂತರ ಅಂಡರ್-17 ತಂಡದಲ್ಲಿ ಆಡಿದ ಸಮಯ ಇದು. ಆ ದಿನಗಳಲ್ಲಿ ವಿರಾಟ್ ಕೊಹ್ಲಿ ತೇಜಸ್ವಿ ನಾಯಕತ್ವದಲ್ಲಿ ಆಡುತ್ತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ    

ತೇಜಸ್ವಿ ಯಾದವ್ ದೆಹಲಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರ ಕ್ರಿಕೆಟ್ ವೃತ್ತಿಜೀವನವು ಅವರ ಶಾಲಾ ದಿನಗಳಿಂದಲೇ ಪ್ರಾರಂಭವಾಯಿತು. 13 ನೇ ವಯಸ್ಸಿನಲ್ಲಿ ಅವರು ದೆಹಲಿಯ ಅಂಡರ್-15 ತಂಡಕ್ಕೆ ಆಯ್ಕೆಯಾದರು. ಯಾದವ್ ತಮ್ಮ ವೃತ್ತಿಪರ ಕ್ರಿಕೆಟ್ ವೃತ್ತಿಜೀವನದಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಕೇವಲ ಒಂದು ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದರು. ಅದರಲ್ಲಿ ಅವರು 3 ರನ್ ಗಳಿಸಲು ಸಾಧ್ಯವಾಯಿತು. ಇದಲ್ಲದೆ, ಅವರು ತಮ್ಮ ಲಿಸ್ಟ್ ಎ ವೃತ್ತಿಜೀವನದಲ್ಲಿ 2 ಪಂದ್ಯಗಳನ್ನು ಮತ್ತು ಒಂದು ಪ್ರಥಮ ದರ್ಜೆ ಪಂದ್ಯವನ್ನೂ ಆಡಿದ್ದಾರೆ. ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಆಡಿದ 7 ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆದಿದ್ದಾರೆ.

ಐಪಿಎಲ್ 2008 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡಕ್ಕೆ 8 ಲಕ್ಷ ರೂ.ಗೆ ಹಾರಾಜಾಗಿದ್ದರು. ನಾಲ್ಕು ಆವೃತ್ತಿಗಳಲ್ಲಿ ಅವರು ದೆಹಲಿ ತಂಡದ ಭಾಗವಾಗಿದ್ದರು. ಆದರೆ ಅವರಿಗೆ ಆಡಲು ಅವಕಾಶ ಸಿಗಲಿಲ್ಲ. 2011ರಲ್ಲಿ ಒಂದು ಆವೃತ್ತಿಗೆ ಅವರ ವೇತನ 8 ಲಕ್ಷದಿಂದ 10 ಲಕ್ಷಕ್ಕೆ ಏರಿಕೆಯಾಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X