ಪ್ರಧಾನಿ ಜೊತೆಗಿನ ಸಂವಾದದ ವೇಳೆ ‘ಅಹಂಕಾರ’ವನ್ನು ಉಲ್ಲೇಖಿಸಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

Date:

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ ‘ಅಹಂಕಾರ’ ಪದವನ್ನು ಉಲ್ಲೇಖಿಸಿದ್ದಾರೆ. ಆಟಗಳ ಬಗ್ಗೆ ಕೊಹ್ಲಿ ಆಡಿರುವ ಮಾತುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಹೇಳಿದಂತೆ ಭಾಸವಾಗಿದೆ.

- Advertisement -

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಬಳಿಕ ಟೀಂ ಇಂಡಿಯಾ ಬೆರಿಲ್‌ ಚಂಡಮಾರುತದಿಂದ ಸಿಲುಕಿ ಹಾಕಿಕೊಂಡಿತ್ತು. ಇದಾದ ನಂತರ ರೋಹಿತ್ ಶರ್ಮಾ ಪಡೆ ಜುಲೈ 4ರಂದು ಬೆಳಿಗ್ಗೆ 6 ಗಂಟೆಗೆ ಬಾರ್ಬಡೋಸ್‌ನಿಂದ ದೆಹಲಿಗೆ ಬಂದಿಳಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ ಶಾ ಜೊತೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ಟೀಮ್‌ ಇಂಡಿಯಾ ಆಟಗಾರರು ಸಂವಾದ ನಡೆಸಿದ್ದರು. ಈ ಸಂವಾದದ ಪೂರ್ಣ ವಿಡಿಯೋವನ್ನು ಶುಕ್ರವಾರ ಸಂಜೆ ಯೂಟ್ಯೂಬ್‌ನಲ್ಲಿ ಖುದ್ದು ಪ್ರಧಾನಿ ಮೋದಿಯೇ ಬಿಡುಗಡೆಗೊಳಿಸಿದ್ದರು.

ಈ ಸಂವಾದದ ವೇಳೆ ಮಾತನಾಡಿರುವ ವಿರಾಟ್‌ ಕೊಹ್ಲಿ, “ನಾನು ಏನು ಮಾಡಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗುತ್ತಿರಲಿಲ್ಲ. ನಾನು ಮಾಡುತ್ತೇನೆ ಎಂದು ನಮಗೆ ಅನಿಸಿದರೆ ನಮ್ಮ ಅಹಂಕಾರ ಹೆಚ್ಚಾಗುತ್ತದೆ. ಆಗ ಆಟ ನಮ್ಮ ಕೈತಪ್ಪಿ ಹೋಗುತ್ತದೆ. ಅಹಂಕಾರವನ್ನೇ ಬಿಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ

ಇದನ್ನು ಓದಿದ್ದೀರಾ?  ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

“ಆಟದ ಸ್ಥಿತಿ ಹಾಗೆಯೇ ಇತ್ತು. ನನಗೆ ನನ್ನ ಅಹಂಕಾರವನ್ನು ತೋರಿಸಲು ಅವಕಾಶವೇ ಇರಲಿಲ್ಲ. ತಂಡಕ್ಕಾಗಿ ನನ್ನ ಅಹಂಕಾರವನ್ನು ನಾನು ಬದಿಗೊತ್ತಬೇಕಾಗಿತ್ತು” ಎಂದು ತಿಳಿಸಿದ್ದಾರೆ.

ಸದ್ಯ ಈ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, “ವಿರಾಟ್ ಕೊಹ್ಲಿ ಪರೋಕ್ಷವಾಗಿ ಪ್ರಧಾನಿ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆಯೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

“ಆ ಅಹಂಕಾರದಿಂದಾಗಿಯೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬರು (ನರೇಂದ್ರ ಮೋದಿ) 303 ಸ್ಥಾನದಿಂದ 240ಕ್ಕೆ ಇಳಿದಿದ್ದಾರೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದರೆ, “ಇನ್ನೊಬ್ಬರನ್ನು ಪರೋಕ್ಷವಾಗಿ ರೋಸ್ಟ್ ಮಾಡುವ ಪ್ರತಿಭೆ ಕೊಹ್ಲಿಗೆ ಇದೆ ಎಂದು ನನಗೆ ತಿಳಿದಿರಲಿಲ್ಲ” ಎಂದು ಮತ್ತೋರ್ವ ನೆಟ್ಟಿಗರು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಟಿ20 ವಿಶ್ವಕಪ್ ಫೈನಲ್ | ವಿರಾಟ್ ಕೊಹ್ಲಿ ಅರ್ಧಶತಕ; ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡಿದ ಟೀಮ್ ಇಂಡಿಯಾ

ಈ ಹಿಂದೆ 2021ರಲ್ಲಿ ಪಾಕಿಸ್ತಾನದ ಎದುರು ಭಾರತ ಸೋತಾಗ ಭಕ್ತರು ಮೊಹಮ್ಮದ್ ಶಮಿ ವಿರುದ್ಧ ಟ್ರೋಲ್ ಮಾಡಿದಾಗ ವಿರಾಟ್ ಕೊಹ್ಲಿ ಶಮಿ ಪರವಾಗಿ ನಿಂತಿದ್ದರು ಎಂಬುವುದನ್ನು ನೆಟ್ಟಿಗರೊಬ್ಬರು ನೆನಪಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚಾರ್‌ ಸೋ ಪಾರ್ ಅಂದರೆ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನೆಲ್ಲ ಭಾಷಣಗಳಲ್ಲಿ ಹೇಳಿಕೊಂಡಿದ್ದರು. ಆದರೆ ಬಿಜೆಪಿ ಬಹುಮತವನ್ನು ಕೂಡಾ ಪಡೆಯಲು ಸಾಧ್ಯವಾಗದೆ ಸದ್ಯ ಮಿತ್ರ ಪಕ್ಷಗಳ ಸಹಾಯದಿಂದ ಸರ್ಕಾರ ರಚಿಸಿದೆ. ಇದಕ್ಕೆಲ್ಲ ಮೋದಿಯ ಅಹಂಕಾರವೇ ಕಾರಣ ಎಂದು ನೆಟ್ಟಿಗರು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...