‘ಓಟು ಪ್ರತಿಷ್ಠಾಪನೆ’ – ಮೋದಿ ಸರ್ಕಾರವನ್ನು ಛೇಡಿಸಿದ ಮಲಯಾಳಂ ಪತ್ರಿಕೆ

Date:

ಸೋಮವಾರ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠ ಕಾರ್ಯಕ್ರಮ ನಡೆದಿದೆ. ರಾಮಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಮಲಯಾಳಂ ‘ದೇಶಾಭಿಮಾನಿ’ ಪತ್ರಿಕೆಯು, ತನ್ನ ಮುಖಪುಟದ ಹೆಡ್‌ಲೈನ್‌ನಲ್ಲಿ, ‘ಓಟು ಪ್ರತಿಷ್ಠ – ಓಟು ಪ್ರತಿಷ್ಠಾಪನೆ’ ಎಂದು ಬರೆದಿದ್ದು, ಮೋದಿ ಸರ್ಕಾರವನ್ನು ಛೇಡಿಸಿದೆ.

ಓಟ್ ಪ್ರತಿಷ್ಠಾಪನೆ ತಲೆ ಬರಹದ ಮೇಲ್ಭಾಗದಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ್ದ ಫೋಟೋವನ್ನು ಪ್ರಕಟಿಸಿದೆ. ಸುದ್ದಿಯ ಒಳಭಾಗದಲ್ಲಿ ಪ್ರಧಾನಿ ಮೋದಿ ಅವರು ರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದ ಚಿತ್ರವನ್ನು ಪ್ರಕಟಿಸಿದೆ.

ಮುಖ್ಯ ವರದಿಯ ಪಕ್ಕದಲ್ಲಿಯೇ, ಬಾಬರಿ ಮಸೀದಿ ಧ್ವಂಸಕ್ಕೆ ಶೋಭಾಯಾತ್ರೆ ನಡೆಸಿದ್ದ ಅಡ್ವಾಣಿ ಹಾಗೂ ಅಶೋಕ್ ಸಿಂಘಾಲ್ ಅವರ ಚಿತ್ರವನ್ನು ಪತ್ರಿಕೆ ಪ್ರಕಟಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖಪುಟದ ಮತ್ತೊಂದು ಭಾಗದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ, “ಧರ್ಮ ಮತ್ತು ಸರ್ಕಾರಿ ಆಡಳಿತ ನಡುವೆ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರಕ್ಕೆ ಯಾವುದೇ ಒಂದು ಧರ್ಮ ಹೆಚ್ಚಲ್ಲ. ಒಂದು ಧರ್ಮ ಕಡಿಮೆಯಲ್ಲ. ಎಲ್ಲರನ್ನೂ ಸಮಾನವಾಗಿ ನಡೆಸಿಕೊಂಡು ದೇಶದ ಜಾತ್ಯಾತೀತ ಮೌಲ್ಯವನ್ನು ಎತ್ತಿಹಿಡಿಯಬೇಕು” ಎಂಬ ಸಂದೇಶವನ್ನು ಪ್ರಕಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಕೃಷ್ಣಾ ನದಿ ಸೇತುವೆ ಕಾಮಗಾರಿ | ಅಂದಾಜು ವೆಚ್ಚ ₹60ರಿಂದ ₹99 ಕೋಟಿಗೆ ಏರಿಕೆ: ಡಿಕೆ ಶಿವಕುಮಾರ್

"ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ...

ಪಶ್ಚಿಮ ಬಂಗಾಳ | ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಬಿಜೆಪಿ ನಾಯಕನ ಬಂಧನ

ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನನ್ನು...