ಎಸ್‌ಐಆರ್‌ ಮೂಲಕ ‘ಮತ ಕಳ್ಳತನ’ವನ್ನು ಮುಚ್ಚಿಹಾಕಲಾಗಿದೆ; ರಾಹುಲ್ ಗಾಂಧಿ ಆರೋಪ

Date:

ಚುನಾವಣಾ ಆಯೋಗ ಮತ್ತು ಬಿಜೆಪಿ ಹಲವಾರು ರಾಜ್ಯಗಳಲ್ಲಿ ಮತದಾರರ ಪಟ್ಟಿಯನ್ನು ‘ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸುವ ಮೂಲಕ ‘ಮತ ಕಳ್ಳತನ’ವನ್ನು ಮುಚ್ಚಿಹಾಕಲು ಪ್ರಯತ್ನಿಸಿವೆ ಎಂಎಉ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -

ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ತರಬೇತಿ ಶಿಬಿರ’ದಲ್ಲಿ ಅವರು ಮಾತನಾಡಿದರು. “ನವೆಂಬರ್ 4 ರಂದು 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಇದು, ಮತದಾರರ ಪಟ್ಟಿಗಳ ಮೂಲಕ ನಡೆದಿರುವ ದೊಡ್ಡ ಅಕ್ರಮ ಮತ್ತು ಮತಗಳ್ಳತನವನ್ನು ಮುಚ್ಚಿಹಾಕುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

“ಮತ ಕಳ್ಳತನವು ಒಂದು ಸಮಸ್ಯೆಯಾಗಿದೆ. ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಘೂ ಛತ್ತೀಸ್‌ಗಢಗಳಲ್ಲಿ ಮತದಾರರ ಪಟ್ಟಿಯನ್ನು ತಿರುಚಲಾಗಿದೆ. ಈಗ, ಅದನ್ನು ಮುಚ್ಚಿಹಾಕಲು ಮತ್ತು ಸಾಂಸ್ಥಿಕಗೊಳಿಸಲು ಎಸ್‌ಐಆರ್ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

“ಕೆಲವು ದಿನಗಳ ಹಿಂದೆ, ನಾನು ಹರಿಯಾಣ ಮತಗಳ್ಳತನದ ಬಗ್ಗೆ ಪಿಪಿಟಿ ಪ್ರಸ್ತುತ ಪಡಿಸಿದ್ದೆ. ಸುಮಾರು 25 ಲಕ್ಷ ಮತಗಳು, ಸರಿಸುಮಾರು ಪ್ರತಿ ಎಂಟರಲ್ಲಿ ಒಂದು ಮತ ಕಳ್ಳತನವಾಗಿದೆ. ಆ ದತ್ತಾಂಶವನ್ನು ಪರಿಶೀಲಿಸಿದ ನಂತರ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿಯೂ ಅದೇ ರೀತಿ ನಡೆದಿದೆ ಎಂಬುದನ್ನು ನಾನು ನಂಬುತ್ತೇನೆ. ಇದು ಬಿಜೆಪಿ ಮತ್ತು ಚುನಾವಣಾ ಆಯೋಗವು ಎಸಗಿರುವ ಪಿತೂರಿ” ಎಂದು ಹೇಳಿದ್ದಾರೆ.

“ನಮ್ಮಲ್ಲಿ ಸಾಕಷ್ಟು ವಿವರವಾದ ಮಾಹಿತಿ ಇದೆ, ಮತ್ತು ನಾವು ಇಲ್ಲಿಯವರೆಗೆ ತೋರಿಸಿರುವುದು ಕೇವಲ ಒಂದು ಸಣ್ಣ ಭಾಗವನ್ನು ಮಾತ್ರ. ಪ್ರಜಾಪ್ರಭುತ್ವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವು ನೇರ ದಾಳಿಗೆ ಒಳಗಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ, ಭಾರತ ಮಾತೆಗೆ ಹಾನಿಯಾಗುತ್ತಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...