ಚುನಾವಣೆಯಲ್ಲಿನ ‘ವೋಟ್ ಚೋರಿ’ (ಮತ ಕಳ್ಳತನ) ಮತ್ತು ಮತದಾರರ ಪಟ್ಟಿಯ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ನವೆಂಬರ್ 1 ರಂದು ಬೃಹತ್ ರ‍್ಯಾಲಿ ಆಯೋಜಿಸಿದೆ. ಈ ರ‍್ಯಾ ಬಗ್ಗೆ ಬಿಜೆಪಿ ಉಚಿತವಾಗಿ ಮತ್ತು ಉತ್ಸಾಹದಿಂದ ಪ್ರಚಾರ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ತಮ್ಮ ರ‍್ಯಾ ಕುರಿತು ಪ್ರಚಾರ ಮಾಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಪ್ರತಿಪಕ್ಷಗಳ ಈ ಅಭಿಯಾನವನ್ನು ದೇಶದ ಮೂಲೆ ಮೂಲೆಗೂ ತಲುಪಿಸುವಂತೆ ಉಚಿತವಾಗಿ ಪ್ರಚಾರ ಮಾಡುತ್ತಿರುವ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಮುಂಬರುವ ಏಳು ದಿನಗಳಲ್ಲಿಯೂ ಬಿಜೆಪಿ ನಾಯಕರು ಇದೇ ರೀತಿಯ ಉತ್ಸಾಹ ಮತ್ತು ಶ್ರದ್ಧೆಯನ್ನು ಕಾಯ್ದುಕೊಳ್ಳಬೇಕು” ಎಂದು ಲೇವಡಿ ಮಾಡಿದ್ದಾರೆ.
“ಚುನಾವಣಾ ಆಯೋಗ ಮತ್ತು ಆಡಳಿತಾರೂಢ ಬಿಜೆಪಿ ಜಂಟಿಯಾಗಿ ಕಾಯ್ದೆ-ಕಾನೂನುಗಳನ್ನು ಗಾಳಿಗೆ ತೂರಿ, ಪಾರದರ್ಶಕತೆ ಇಲ್ಲದೆ ಮತದಾರರ ಪಟ್ಟಿಯಿಂದ ಸಾಲು ಸಾಲಾಗಿ ಹೆಸರುಗಳನ್ನು ತೆಗೆದುಹಾಕುತ್ತಿವೆ. ಚುನಾವಣಾ ಅಕ್ರಮಗಳ ಕುರಿತು ಪ್ರಶ್ನೆ ಕೇಳಿದವರ ಮೇಲೆ ಸರ್ಕಾರವು ಲಾಠಿ ಚಾರ್ಜ್ ನಡೆಸುತ್ತಿದೆ. ಈ ಅನ್ಯಾಯದ ವಿರುದ್ಧ ಪ್ರತಿಪಕ್ಷಗಳು ಎಂದಿಗೂ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈಗ ದೇಶದ ಜನರೇ ಇದಕ್ಕೆ ಸರಿಯಾದ ಉತ್ತರ ನೀಡಲಿದ್ದಾರೆ” ಎಂದು ರಾಹುಲ್ ಎಚ್ಚರಿಸಿದ್ದಾರೆ.
“ನವೆಂಬರ್ 1 ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ‘ವೋಟ್ ಬಚಾವೋ – ದೇಶ್ ಬಚಾವೋ’ (ಮತ ಉಳಿಸಿ – ದೇಶ ಉಳಿಸಿ) ಎಂಬ ಪ್ರಮುಖ ಘೋಷಣೆಯೊಂದಿಗೆ ಬೃಹತ್ ಜನತಾ ಮಾರ್ಚ್ ಮತ್ತು ಮಹಾ ರ‍್ಯಾಲಿ ನಡೆಯಲಿದೆ. ದೇಶದ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಳಜಿ ಹೊಂದಿರುವ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು ಹಾಗೂ ವರ್ತಕರು ಸೇರಿದಂತೆ ಪ್ರತಿಯೊಬ್ಬ ನಾಗರಿಕನೂ ಈ ಹೋರಾಟಕ್ಕೆ ಕೈಜೋಡಿಸಿ ‘ಚಲೋ ದೆಹಲಿ’ ಅಭಿಯಾನವನ್ನು ಯಶಸ್ವಿಗೊಳಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.
हमारा वोट चुराया जा रहा है और ये हम किसी हाल में चुपचाप नहीं सहेंगे। मतदाता सूचियों से नाम काटे गए। नियम-कानून तोड़े गए। और सवाल पूछने वालों पर लाठियां चलीं। अब जवाब देश देगा। 1 नवंबर – चलो दिल्ली। वोट बचाओ – देश बचाओ जन मार्च और महारैली। छात्र, किसान, मज़दूर, महिलाएं, नौजवान और व्यापारी – जिस-जिस को लोकतंत्र की फ़िक्र है, वो ज़रूर आए। वोट आपका है। लड़ाई भी आपकी है। 📍 रामलीला मैदान, नई दिल्ली PS: BJP और उसके साथियों का दिल से धन्यवाद, जो इस कार्यक्रम का इतना ज़ोर-शोर से प्रचार कर रहे हैं और इसे ज़्यादा से ज़्यादा लोगों तक पहुंचा रहे हैं। बस अगले 7 दिन भी यही जोश और लगन बनाए रखिए! #ChaloDilli #RamlilaMarch
— Rahul Gandhi (@RahulGandhi) October 25, 2026
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಇದೇ ಸರಣಿಯ ಭಾಗವಾಗಿ ಅಕ್ಟೋಬರ್ 30 ರಂದು ಪ್ರತಿಪಕ್ಷಗಳ ನಾಯಕರು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಸಾರ್ವಜನಿಕ ಮಹಾಭಿಯೋಗ’ ನಡೆಸಿ, ತಮ್ಮ ಸಾರ್ವಜನಿಕ ತೀರ್ಪನ್ನು ಪ್ರಕಟಿಸಲಿದ್ದಾರೆ.
ಇನ್ನೊಂದೆಡೆ, ನವೆಂಬರ್ 1 ರಂದು ರ‍್ಯಾಲಿ ಹಮ್ಮಿಕೊಂಡಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ದಿನದಂದು ಬೃಹತ್ ಸಮಾವೇಶ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷವು 1984ರ ಸಿಖ್ ವಿರೋಧಿ ದಂಗೆಯ ಸಂತ್ರಸ್ತರ ಗಾಯದ ಮೇಲೆ ಬಿಸಿ ನೀರು ಎರಚುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.




