ಮತ ಕಳವು ದೇಶದ್ರೋಹದ ಕೃತ್ಯ: ಎಕ್ಸ್‌ಪ್ರೆಸ್ ವರದಿ ಬೆನ್ನಲ್ಲೇ ಇಸಿ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Date:

ಚುನಾವಣಾ ಆಯೋಗದ (ಇಸಿಐ) ಆಂತರಿಕ ನಿರ್ಧಾರಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ನಡೆಸಿದ ತನಿಖಾ ವರದಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ವರದಿಯನ್ನು ಉಲ್ಲೇಖಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಆಡಳಿತಾರೂಢ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಚುನಾವಣಾ ಆಯೋಗದ ವಿರುದ್ಧ ‘ಮತ ಚೋರಿ’ (ಮತ ಕಳವು) ಆರೋಪವನ್ನು ಮತ್ತೆ ತೀವ್ರಗೊಳಿಸಿದ್ದು, ಇದನ್ನು “ದೇಶದ್ರೋಹದ ಕೃತ್ಯ” ಎಂದು ಕರೆದಿದ್ದಾರೆ.

- Advertisement -

‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೂರು ಸದಸ್ಯರ ಚುನಾವಣಾ ಆಯೋಗದಲ್ಲಿ ತೀವ್ರ ಭಿನ್ನಾಭಿಪ್ರಾಯಗಳು ಮೂಡಿದ್ದವು. ಕಳೆದ 10 ತಿಂಗಳುಗಳಲ್ಲಿ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಆಯೋಗ ತೆಗೆದುಕೊಂಡ ಹಲವು ಪ್ರಮುಖ ನಿರ್ಧಾರಗಳಿಗೆ ಅಧಿಕೃತವಾಗಿ ಕನಿಷ್ಠ 14 ಬಾರಿಯಾದರೂ ಆಕ್ಷೇಪಣೆ ದಾಖಲಿಸಿದ್ದರು ಎಂದು ವರದಿ ತಿಳಿಸಿದೆ. ಮತದಾರರ ಸೇರ್ಪಡೆ, ಹೆಸರು ತೆಗೆದುಹಾಕುವುದಕ್ಕೆ ಸಂಬಂಧಿಸಿದ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ವರದಿ ಪ್ರಕಟವಾದ ಬೆನ್ನಲ್ಲೇ ‘ಎಕ್ಸ್’ ತಾಣದಲ್ಲಿ ವೀಡಿಯೋ ಸಮೇತ ಪೋಸ್ಟ್ ಹಂಚಿಕೊಂಡ ರಾಹುಲ್ ಗಾಂಧಿ, “ಮತ ಕಳವು ಎಂಬುದು ಭಾರತೀಯ ಜನೆತೆಯ ವಿರುದ್ಧ ನಡೆಸಿದ ಅಪರಾಧ ಮತ್ತು ನಮ್ಮ ಸಂವಿಧಾನದ ಮೇಲಿನ ನೇರ ದಾಳಿ. ಇದನ್ನು ಆಯೋಜಿಸಿದ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗ ದೇಶದ್ರೋಹ ಎಸಗಿವೆ. ಶೀಘ್ರದಲ್ಲೇ ನ್ಯಾಯ ಸಿಗಲಿದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಅಲ್ಲದೆ, “ನಾವು ಮಾಡುತ್ತಿರುವುದು ತಪ್ಪು ಎಂಬುದನ್ನು ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳಿಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಇದು ದೇಶದ್ರೋಹ. ಕಾಲ ಬರಲಿದೆ, ನಾವು ನಿಮ್ಮನ್ನು ಒಂದಲ್ಲ ಒಂದು ದಿನ ಹಿಡಿಯುತ್ತೇವೆ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ ತಂತ್ರವೋ?

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ,...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ...

ನೆಹರೂ-ಶಾಸ್ತ್ರಿ ಕಾಲದ ಕಟ್ಟಡಗಳಿಗೆ ಮೋದಿ ಬುಲ್ಡೋಝರ್: ಕೃಷಿ ಭವನ, ಶಾಸ್ತ್ರಿ ಭವನ ನೆಲಸಮಕ್ಕೆ ಸಿದ್ಧತೆ!

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ನವದೆಹಲಿಯ ಲೂಟಿಯನ್ಸ್ ವಲಯದಲ್ಲಿ ಕೈಗೆತ್ತಿಕೊಂಡಿರುವ 'ಸೆಂಟ್ರಲ್...