ಕಾಂಗ್ರೆಸ್‌ಗೆ ಮತ ಹಾಕಿದರೆ ಮತ ವಿಭಜನೆಯಾಗಿ ಬಿಜೆಪಿಗೆ ಲಾಭವಾಗುತ್ತದೆ: ಅಭಿಷೇಕ್ ಬ್ಯಾನರ್ಜಿ

Date:

ಕಾಂಗ್ರೆಸ್‌ಗೆ ಮತ ಹಾಕಬೇಡಿ. ನೀವು ಕಾಂಗ್ರೆಸ್‌ಗೆ ಮತ ಹಾಕಿದರೆ ಬಿಜೆಪಿಯೇತರ ಮತಗಳ ವಿಭಜನೆಯಾಗಿ ಕೇಸರಿ ಪಕ್ಷಕ್ಕೆ ಲಾಭವಾಗುತ್ತದೆ. ಬಿಜೆಪಿಯನ್ನು ಬಲಪಡಿಸುತ್ತದೆ ಎಂದು ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಲಂಗಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅಭಿಷೇಕ್, “ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಎಡಪಂಥೀಯರೊಂದಿಗೆ ಸಂಬಂಧ ಹೊಂದಿದೆ. 2024ರಲ್ಲಿ, ಟಿಎಂಸಿ ಸರ್ಕಾರ 2026ರವರೆಗೆ ಇರುತ್ತದೆ ಎಂದು ತಿಳಿದಿದ್ದರಿಂದ ಅನೇಕರು ಸಿಪಿಐ(ಎಂ) ಮತ್ತು ಕಾಂಗ್ರೆಸ್‌ಗೆ ಮತ ಹಾಕಿದರು. ಆದರೆ ಈ ಚುನಾವಣೆ ಟಿಎಂಸಿಗೆ ನಾಲ್ಕನೇ ಗೆಲುವು ತರುವ ವಿಚಾರವಲ್ಲ. ಇದು ಬಿಜೆಪಿಯ ಬಿ ಮತ್ತು ಸಿ ತಂಡಗಳನ್ನು ಹೊರಹಾಕುವ ಚುನಾವಣೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ, ನಿಮ್ಮ ಕೇಂದ್ರ ನಿಧಿಯನ್ನು ನಿಲ್ಲಿಸಿದವರಿಗೆ ಪಾಠ ಕಲಿಸುವ ಸಮಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ಬಂಗಾಳ ಚುನಾವಣೆ | ಮಮತಾ-ಅಭಿಷೇಕ್ ಜಂಟಿ ತಂತ್ರ – ಒಂಟಿ ಪ್ರಚಾರ; ಬಿಜೆಪಿ ಅತಂತ್ರ?

ಇನ್ನು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಭಿಷೇಕ್ ಬ್ಯಾನರ್ಜಿ, “ಬಿಜೆಪಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂರು ಏಜೆನ್ಸಿಗಳನ್ನು ನಿಯೋಜಿಸಿದೆ. ಅದರ ಉಸ್ತುವಾರಿಯಲ್ಲಿ ಮೂವರು ಏಜೆಂಟರು ಇದ್ದಾರೆ. ಮೊದಲನೆಯದು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ. ಅವರು ಜನರ ಹೆಸರುಗಳನ್ನು ಅಳಿಸುವಲ್ಲಿ ನಿರತರಾಗಿದ್ದಾರೆ. ಎರಡನೇ ಏಜೆಂಟ್ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ. ಅವರಿಗೆ ಅಮಿತ್ ಶಾ ಅವರ ಕೇಂದ್ರ ಪಡೆಗಳು ಭದ್ರತೆಯನ್ನು ಒದಗಿಸುತ್ತವೆ. ಮೂರನೇ ಏಜೆಂಟ್ ಹುಮಾಯೂನ್ ಕಬೀರ್ ಅವರ ಜನತಾ ಉನ್ನಾಯನ್ ಪಕ್ಷ ಮತ್ತು ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ” ಎಂದು ಆರೋಪಿಸಿದರು.

ಎಸ್‌ಐಆರ್ ವಿಚಾರವನ್ನು ಪ್ರಸ್ತಾಪಿಸಿದ ಬ್ಯಾನರ್ಜಿ, “ಎಸ್‌ಐಆರ್ ಕಾರಣದಿಂದಾಗಿ ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಕಾಣೆಯಾದಾಗ ಅವರು (ಕಾಂಗ್ರೆಸ್) ನಿಮಗೆ (ಚುನಾವಣೆಗೆ ಸಂಬಂಧಿಸಿ) ಸಹಾಯ ಮಾಡಿದ್ದಾರೆಯೇ? ಟಿಎಂಸಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷವು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರುಗಳು ಸೇರ್ಪಡೆಯಾಗುವಂತೆ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಧೈರ್ಯದಿಂದ ಹೋರಾಡಲಿಲ್ಲ” ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ 294 ಸದಸ್ಯ ಬಲದ ವಿಧಾನಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆಯಲಿದೆ. 152 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 23ರಂದು ನಡೆಯಲಿದೆ. 142 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ಏಪ್ರಿಲ್ 29ರಂದು ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಯ (IAF) ಮುಂದಿನ ಮುಖ್ಯಸ್ಥರನ್ನಾಗಿ ಏರ್ ಮಾರ್ಷಲ್...

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...