ಲೋಕಸಭೆ ಚುನಾವಣೆ 4ನೇ ಹಂತ: ಬಂಗಾಳದಲ್ಲಿ ಟಿಎಂಸಿ ನಾಯಕ ಹತ್ಯೆ, ಆಂಧ್ರದಲ್ಲಿ ಏಜೆಂಟರ ಅಪಹರಣ

Date:

ಹತ್ತು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಒಳಗೊಂಡು 96 ಕ್ಷೇತ್ರಗಳಿಗೆ 4ನೇ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕೆಲವು ರಾಜ್ಯಗಳಲ್ಲಿ ಗಲಭೆ ಸಂಭವಿಸಿವೆ. ಬೆಳಿಗ್ಗೆ 9 ಗಂಟೆ ವೇಳೆಗೆ ಒಟ್ಟಾರೆ ಶೇ. 10.35 ಮತದಾನ ಚಲಾವಣೆಯಾಗಿದೆ.

- Advertisement -

ಇದೇ ದಿನದಂದು ಆಂಧ್ರ ಪ್ರದೇಶದ 175 ಕ್ಷೇತ್ರಗಳ ಹಾಗೂ ಒಡಿಶಾದ 147 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಬಾಂಬ್‌ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.ಬೋಲ್‌ಪುರ್‌ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಮೃತನನ್ನು ಮಿಂಟು ಶೇಖ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಆಂಧ್ರ ಪ್ರದೇಶದ ಕೆಲವು ಕಡೆ ಹಿಂಸಾಚಾರ ನಡೆದಿದೆ. ಚಿತ್ತೂರು ಜಿಲ್ಲೆಯಲ್ಲಿ ಮೂವರು ಟಿಡಿಪಿ ಚುನಾವಣಾ ಏಜೆಂಟರನ್ನು ಅಪಹರಿಸಲಾಗಿದ್ದು, ಪೊಲೀಸರು ಮೂವರನ್ನೂ ರಕ್ಷಿಸಿದ್ದಾರೆ. ಘಟನೆಗೆ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಕಾರಣ ಎಂದು ಟಿಡಿಪಿ ನಾಯಕರು ಆರೋಪಿಸಿದ್ದಾರೆ.

ಇಂದಿನ ಲೋಕಸಭಾ ಚುನಾವಣೆಯಲ್ಲಿ ಆಂಧ್ರ ಪ್ರದೇಶ 25, ತೆಲಂಗಾಣ 17, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ ತಲಾ 8, ಬಿಹಾರ 5, ಒಡಿಶಾ, ಜಾರ್ಖಂಡ್ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಈ ಮೊದಲಿನ ಮೂರು ಹಂತದಲ್ಲಿ 283 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು,  ಇಂದಿನ 96 ಕ್ಷೇತ್ರ ಸೇರಿ ಒಟ್ಟು 379 ಕ್ಷೇತ್ರಗಳಿಗೆ ಚುನಾವಣೆ ನಡೆದಂತಾಗುತ್ತದೆ. ಮೇ.20, ಮೇ 25 ಹಾಗೂ ಜೂ.1 ರಂದು ಉಳಿದ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...