VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

Date:

Advertisements

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ. ಸುದರ್ಶನ್‌ ರೆಡ್ಡಿ ಅವರ ಮೇಲೆ ಗೃಹ ಸಚಿವ ಅಮಿತ್‌ ಶಾ ಅವರ ದಾಳಿಯನ್ನು ದುರದೃಷ್ಟಕರ ಎಂದು ಹಲವು ನಿವೃತ್ತ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಅಮಿತ್ ಶಾ ಅವರು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಸುದರ್ಶನ್ ರೆಡ್ಡಿ ಅವರು ಮಾವೋವಾದವನ್ನು ‘ಬೆಂಬಲಿಸುತ್ತಾರೆ’ ಎಂದು ಆರೋಪಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಕುರಿಯನ್ ಜೋಸೆಫ್, ಮದನ್ ಬಿ. ಲೋಕೂರ್ ಮತ್ತು ಜೆ. ಚೆಲಮೇಶ್ವರ್ ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ತಂಡ ಸಚಿವರೊಬ್ಬರ ಸುಪ್ರೀಂ ಕೋರ್ಟ್‌ನ ತೀರ್ಪಿನ “ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ”ವು ಅದರ ನ್ಯಾಯಾಧೀಶರ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Advertisements

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಲ್ವಾ ಜುಡುಮ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸಾರ್ವಜನಿಕವಾಗಿ ತಪ್ಪಾಗಿ ಅರ್ಥೈಸಿಕೊಂಡಿರುವ ಹೇಳಿಕೆ ದುರದೃಷ್ಟಕರ. ತೀರ್ಪು ಎಲ್ಲಿಯೂ, ಸ್ಪಷ್ಟವಾಗಿ ಅಥವಾ ಅದರ ಪಠ್ಯದ ಪರಿಣಾಮಗಳ ಮೂಲಕ, ನಕ್ಸಲ್ವಾದ ಅಥವಾ ಅದರ ಸಿದ್ಧಾಂತವನ್ನು ಅನುಮೋದಿಸುವುದಿಲ್ಲ ಎಂದು 18 ಮಾಜಿ ನ್ಯಾಯಾಧೀಶರು ಸಹಿ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೇಳಿಕೆಗೆ ಸಹಿ ಹಾಕಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಎ ಕೆ ಪಟ್ನಾಯಕ್‌‍, ಅಭಯ್‌ ಓಕಾ, ಗೋಪಾಲ ಗೌಡ, ವಿಕ್ರಮ್‌ಜಿತ್‌‍ ಸೇನ್‌‍, ಕುರಿಯನ್‌ ಜೋಸೆಫ್‌‍, ಮದನ್‌ ಬಿ ಲೋಕೂರ್‌ ಮತ್ತು ಜೆ ಚೆಲಮೇಶ್ವರ್‌ ಅವರುಗಳು ಭಾರತದ ಉಪರಾಷ್ಟ್ರಪತಿ ಹುದ್ದೆಯ ಪ್ರಚಾರವು ಸೈದ್ಧಾಂತಿಕವಾಗಿರಬಹುದು, ಆದರೆ ಅದನ್ನು ನಾಗರಿಕವಾಗಿ ಮತ್ತು ಘನತೆಯಿಂದ ನಡೆಸಬಹುದು. ಯಾವುದೇ ಅಭ್ಯರ್ಥಿಯ ಸಿದ್ಧಾಂತ ಎಂದು ಕರೆಯಲ್ಪಡುವ ಟೀಕೆಯನ್ನು ತ್ಯಜಿಸಬೇಕು ಎಂದು ನಿವೃತ್ತ ನ್ಯಾಯಾಧೀಶರು ತಿಳಿಸಿದ್ದಾರೆ.

ಭಾರತದ ಉಪರಾಷ್ಟ್ರಪತಿ ಹುದ್ದೆಯ ಮೇಲಿನ ಗೌರವದಿಂದ, ಅವಮಾನ ಮಾಡುವುದನ್ನು ತಡೆಯುವುದು ಬುದ್ಧಿವಂತ ನಡೆ ಎಂದು ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನ ಏಳು ನಿವೃತ್ತ ನ್ಯಾಯಾಧೀಶರಲ್ಲದೆ, ಮೂವರು ಹೈಕೋರ್ಟ್‌ಗಳ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಗೋವಿಂದ್‌ ಮಾಥುರ್‌, ಎಸ್‌. ಮುರಳೀಧರ್‌ ಮತ್ತು ಸಂಜಿಬ್‌ ಬ್ಯಾನರ್ಜಿ ಕೂಡ ಹೇಳಿಕೆಗೆ ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X