ಸೇವಕನನ್ನು ಟ್ರಂಪ್‌ ಆಹ್ವಾನಿಸಿರುವುದು ಪ್ರಧಾನಿಗೆ ದೊಡ್ಡ ಅಪಮಾನ: ಸುಬ್ರಮಣಿಯನ್ ಸ್ವಾಮಿ

Date:

ಡೊನಾಲ್ಡ್‌ ಟ್ರಂಪ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭಾರತದ ನಾಯಕರನ್ನು ಔಪಚಾರಿಕ ಆಹ್ವಾನಿಸಲಾಗಿದೆ ಎಂದು ಭಾರತದ ಮಾಧ್ಯಮಗಳು ಮಾಡಿರುವ ಸುದ್ದಿಯನ್ನು ನೋಡಿ ಅಮೆರಿಕದಲ್ಲಿ ನನ್ನ ಸ್ನೇಹಿತರು ನಗುತ್ತಿದ್ದಾರೆ. ಸಮಾರಂಭಕ್ಕೆ ಸೇವಕನನ್ನು (ಜೈಶಂಕರ್) ಆಹ್ವಾನಿಸಲಾಗಿದೆಯೇ ಹೊರತು ಪ್ರಧಾನಿಯವರನ್ನಲ್ಲ (ಮೋದಿ). ಇದು ದೊಡ್ಡ ಅವಮಾನವಲ್ಲವೇ ? ಆಹ್ವಾನ ಸ್ವೀಕರಿಸಿದ್ದಕ್ಕಾಗಿ ಸೇವಕನನ್ನು ವಜಾಗೊಳಿಸಿ’ ಎಂದು ಸ್ವಾಮಿ ಆರೋಪಿಸಿದ್ದಾರೆ.

- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಇದೇ 20ರಂದು ಅಧಿಕಾರ ಸ್ವೀಕರಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಭಾರತದ ಪ್ರತಿನಿಧಿಯಾಗಿ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದ ಬೆನ್ನಲ್ಲೇ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಇತ್ತೀಚಿಗೆ ಮೋದಿ ಅವರು ಸೇವಕನನ್ನು (ಜೈಶಂಕರ್) ಅಮೆರಿಕಕ್ಕೆ ಕಳುಹಿಸಿದ್ದರು. ಜತೆಗೆ, ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಮೋದಿ ಅವರಿಗೆ ಆಹ್ವಾನ ನೀಡುವಂತೆ ಹೇಳಿ ಬರುವಂತೆಯೂ ಜೈಶಂಕರ್‌ಗೆ ಸೂಚಿಸಲಾಗಿತ್ತು. ಅದರಂತೆಯೇ ಜೈಶಂಕರ್ ನಡೆದುಕೊಂಡಿದ್ದರು. ಇಲ್ಲದಿದ್ದರೆ ಅವರು (ಜೈಶಂಕರ್) ತಮ್ಮ ಹುದ್ದೆಯನ್ನು ಕಳೆದುಕೊಳ್ಳುತ್ತಿದ್ದರು’ ಎಂದು ಸ್ವಾಮಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಸದ್ಯ ಡೊನಾಲ್ಡ್ ಟ್ರಂಪ್ ಅವರು ಮೋದಿಯನ್ನು ಆಹ್ವಾನಿಸುವ ಮನಸ್ಥಿತಿಯಲ್ಲಿಲ್ಲ. 2023ರಲ್ಲಿ ಟ್ರಂಪ್ ಅವರ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಮೋದಿ ಘೋಷಿಸಿದ್ದರು. ಮೋದಿ ಅವರು ಆಹ್ವಾನವನ್ನು ತಿರಸ್ಕರಿಸುವ ಮೂಲಕ ಟ್ರಂಪ್‌ಗೆ ನೋವುಂಟು ಮಾಡಿದ್ದರು ಎಂದೂ ಸ್ವಾಮಿ ಹೇಳಿದ್ದಾರೆ.

ಜೈಶಂಕರ್ ಅವರು ಡಿಸೆಂಬರ್ 24ರಿಂದ 29ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಗಾಗಲೇ ನೇಮಕ ಮಾಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ವೃದ್ಧಿ ಹಾಗೂ ಪ್ರಸಕ್ತ ಜಾಗತಿಕ ವಿಷಯಗಳ ಕುರಿತು ಈ ಇಬ್ಬರೂ ನಾಯಕರು ಚರ್ಚಿಸಿದ್ದರು. ಚುನಾಯಿತ ಅಧ್ಯಕ್ಷ ಟ್ರಂಪ್ ಅವರ ಮುಂದಿನ ಆಡಳಿತದ ಉನ್ನತಾಧಿಕಾರಿಯ ಜತೆಗೆ ಭಾರತದ ಸಚಿವರು ನಡೆಸಿದ ಮೊದಲ ಸಭೆ ಇದಾಗಿತ್ತು.

https://twitter.com/Swamy39/status/1878440701144252795?ref_src=twsrc%5Etfw%7Ctwcamp%5Etweetembed%7Ctwterm%5E1878440701144252795%7Ctwgr%5E916ee26faf2b9ccf4027f76960cc02fce2604aee%7Ctwcon%5Es1_&ref_url=https%3A%2F%2Fwww.deccanherald.com%2F%2Findia%2Fwaiter-invited-but-pm-was-not-subramanian-swamy-on-s-jaishankar-going-for-trumps-swearing-in-3352555
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...